Featured

ಮಂಗಳೂರು:ಮಂಗಳೂರು : ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ : ಜನಾರ್ದನ ಪೂಜಾರಿ – Vishwanews24

ಮಂಗಳೂರು : ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ : ಜನಾರ್ದನ ಪೂಜಾರಿ – Vishwanews24

26ರಂದು ಜನಾರ್ದನ ಪೂಜಾರಿ ನೇತೃತ್ವದಲ್ಲಿ ಜಾಥಾ..

ಮಂಗಳೂರು: ಹೊಸದಿಲ್ಲಿಯಲ್ಲಿ ಗಣರಾಜ್ಯೋತ್ಸವದ ಪರೇಡ್‌ನ‌ಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ.

ಜ. 26ರಂದು ಅವಿಭಜಿತ ದ.ಕ. ಜಿಲ್ಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಕೂಡುವಿಕೆಯಿಂದ ಪ್ರತೀ ತಾಲೂಕುಗಳಲ್ಲಿ ಆಯೋಜಿಸಲಾದ ಟ್ಯಾಬ್ಲೋ ಮೆರವಣಿಗೆ ಜಾತಿ, ಮತ, ಪಂಥ ಭೇದ ಮರೆತು ಎಲ್ಲರೂ ಬೆಂಬಲಿಸಬೇಕಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ಗುರುಗಳ ವಿಷಯದಲ್ಲಿ ರಾಜಕೀಯ ಸಲ್ಲದು. ಈ ಬಗ್ಗೆ ಗುರುಗಳ ಅನುಯಾಯಿಗಳು ಕೇಂದ್ರದ ನಿರ್ಧಾರವನ್ನು ಖಂಡಿಸಬೇಕು. ಜ.26ರಂದು ನಡೆಯುವ ಜಾಥಾವನ್ನು ಜಾತಿ, ಮತ, ಪಂಥ ಮರೆತು ಬೆಂಬಲಿಸೋಣ. ಗುರುಗಳ ತತ್ತ್ವದಂತೆ ಸಂಘರ್ಷ ರಹಿತವಾಗಿ ನಾವು ನಮ್ಮ ಹಕ್ಕು ಮಂಡಿಸೋಣ. ಇದು ಯಾರ ವಿರುದ್ಧವೂ ಪ್ರತಿಭಟನೆಯಲ್ಲ, ಗುರುದೇವರ ಭಕ್ತರಿಗೆ ಸ್ವಾಭಿಮಾನ ದಿನವಾಗಲಿ ಎಂದು ತಿಳಿಸಿದ್ದಾರೆ.

ಅಂದಿನ ದಿನ ಹಳದಿ ವಸ್ತ್ರಧಾರಣೆ ಮಾಡಿ ಎಲ್ಲ ನಾರಾಯಣ ಗುರು ಸಂಘಗಳಲ್ಲಿ ಗುರುದೇವರಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಮಾಡಬೇಕಿದೆ. ಇದು ಯಾರ ವಿರುದ್ಧವೂ ಪ್ರತಿಭಟನೆ ಅಲ್ಲ; ಇದು ಗುರುದೇವರ ಭಕ್ತರಿಗೆ ಸ್ವಾಭಿಮಾನ ದಿನ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಪ್ರತಿಕೃತಿ ನಿರಾಕರಣೆ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಜ.26ರಂದು ಕಾಂಗ್ರೆಸ್ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಜಾಥಾ ನಡೆಯಲಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

11 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

12 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

13 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

14 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

14 hours ago