ಮಂಗಳೂರು: ಹೊಸದಿಲ್ಲಿಯಲ್ಲಿ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ.
ಜ. 26ರಂದು ಅವಿಭಜಿತ ದ.ಕ. ಜಿಲ್ಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಕೂಡುವಿಕೆಯಿಂದ ಪ್ರತೀ ತಾಲೂಕುಗಳಲ್ಲಿ ಆಯೋಜಿಸಲಾದ ಟ್ಯಾಬ್ಲೋ ಮೆರವಣಿಗೆ ಜಾತಿ, ಮತ, ಪಂಥ ಭೇದ ಮರೆತು ಎಲ್ಲರೂ ಬೆಂಬಲಿಸಬೇಕಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಗುರುಗಳ ವಿಷಯದಲ್ಲಿ ರಾಜಕೀಯ ಸಲ್ಲದು. ಈ ಬಗ್ಗೆ ಗುರುಗಳ ಅನುಯಾಯಿಗಳು ಕೇಂದ್ರದ ನಿರ್ಧಾರವನ್ನು ಖಂಡಿಸಬೇಕು. ಜ.26ರಂದು ನಡೆಯುವ ಜಾಥಾವನ್ನು ಜಾತಿ, ಮತ, ಪಂಥ ಮರೆತು ಬೆಂಬಲಿಸೋಣ. ಗುರುಗಳ ತತ್ತ್ವದಂತೆ ಸಂಘರ್ಷ ರಹಿತವಾಗಿ ನಾವು ನಮ್ಮ ಹಕ್ಕು ಮಂಡಿಸೋಣ. ಇದು ಯಾರ ವಿರುದ್ಧವೂ ಪ್ರತಿಭಟನೆಯಲ್ಲ, ಗುರುದೇವರ ಭಕ್ತರಿಗೆ ಸ್ವಾಭಿಮಾನ ದಿನವಾಗಲಿ ಎಂದು ತಿಳಿಸಿದ್ದಾರೆ.
ಅಂದಿನ ದಿನ ಹಳದಿ ವಸ್ತ್ರಧಾರಣೆ ಮಾಡಿ ಎಲ್ಲ ನಾರಾಯಣ ಗುರು ಸಂಘಗಳಲ್ಲಿ ಗುರುದೇವರಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಮಾಡಬೇಕಿದೆ. ಇದು ಯಾರ ವಿರುದ್ಧವೂ ಪ್ರತಿಭಟನೆ ಅಲ್ಲ; ಇದು ಗುರುದೇವರ ಭಕ್ತರಿಗೆ ಸ್ವಾಭಿಮಾನ ದಿನ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಪ್ರತಿಕೃತಿ ನಿರಾಕರಣೆ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಜ.26ರಂದು ಕಾಂಗ್ರೆಸ್ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಜಾಥಾ ನಡೆಯಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…