Featured

ಮಂಗಳೂರು:ಮಗ ಮತ್ತೊಮ್ಮೆ ಸಿಎಂ ಆಗ್ಬೇಕು :ಕರಾವಳಿಯ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ದೇವೇಗೌಡರು – Vishwanews24

ಮಂಗಳೂರು:ಮಗ ಮತ್ತೊಮ್ಮೆ ಸಿಎಂ ಆಗ್ಬೇಕು :ಕರಾವಳಿಯ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ದೇವೇಗೌಡರು

ಮಂಗಳೂರು: ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ; ಯಾರು ಸಿಎಂ ಆಗುತ್ತಾರೆ ಎಂಬ ಲೆಕ್ಕಾಚಾರಗಳು ಈಗಲೇ ಶುರುವಾಗಿದೆ. ಈ ನಡುವೆ, ಕುಮಾರಸ್ವಾಮಿ ಮುಂದಿನ ಸಿಎಂ ಆಗಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಇದೀಗ ತುಳುನಾಡಿನ ದೈವ-ದೇವರ ಮೊರೆ ಹೋಗುವ ಮೂಲಕ ಹರಕೆ ಹೊತ್ತಿದ್ದಾರೆ.

ತನ್ನ ಮಗ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಜಪೆ ಸುಂಕದಕಟ್ಟೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ಹರಕೆ ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಸಿಎಂ ಆದರೆ ರಂಗಪೂಜೆ ನೆರವೇರಿಸುವುದಾಗಿ ಹರಕೆ ಹೊತ್ತಿದ್ದಾರೆ. ಬಳಿಕ ಪೆರಾರ ಬ್ರಹ್ಮಬಲಾಂಡಿ ದೈವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಕುಮಾರಸ್ವಾಮಿ ಸಿಎಂ ಆಗಲು ಅವಕಾಶ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.ಕಾಂಗ್ರೆಸ್ ಟಿಕೆಟ್ ನೀಡದ ಮಂಗಳೂರು ಉತ್ತರ ಕ್ಷೇತ್ರದಲ್ಲೇ ಮೊಯಿದ್ದೀನ್ ಬಾವಾ ಜೆಡಿಎಸ್‌ನಿಂದ ಸ್ಪರ್ಧಿಸಿದ್ದು, ಬಾವಾ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲು ದೇವೇಗೌಡರು ಕರಾವಳಿಗೆ ಭೇಟಿ ನೀಡಿದ್ದರು

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

3 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

11 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

11 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

11 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

11 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

11 hours ago