ಮಂಗಳೂರು: ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ; ಯಾರು ಸಿಎಂ ಆಗುತ್ತಾರೆ ಎಂಬ ಲೆಕ್ಕಾಚಾರಗಳು ಈಗಲೇ ಶುರುವಾಗಿದೆ. ಈ ನಡುವೆ, ಕುಮಾರಸ್ವಾಮಿ ಮುಂದಿನ ಸಿಎಂ ಆಗಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಇದೀಗ ತುಳುನಾಡಿನ ದೈವ-ದೇವರ ಮೊರೆ ಹೋಗುವ ಮೂಲಕ ಹರಕೆ ಹೊತ್ತಿದ್ದಾರೆ.
ತನ್ನ ಮಗ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಜಪೆ ಸುಂಕದಕಟ್ಟೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ಹರಕೆ ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಸಿಎಂ ಆದರೆ ರಂಗಪೂಜೆ ನೆರವೇರಿಸುವುದಾಗಿ ಹರಕೆ ಹೊತ್ತಿದ್ದಾರೆ. ಬಳಿಕ ಪೆರಾರ ಬ್ರಹ್ಮಬಲಾಂಡಿ ದೈವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಕುಮಾರಸ್ವಾಮಿ ಸಿಎಂ ಆಗಲು ಅವಕಾಶ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.ಕಾಂಗ್ರೆಸ್ ಟಿಕೆಟ್ ನೀಡದ ಮಂಗಳೂರು ಉತ್ತರ ಕ್ಷೇತ್ರದಲ್ಲೇ ಮೊಯಿದ್ದೀನ್ ಬಾವಾ ಜೆಡಿಎಸ್‌ನಿಂದ ಸ್ಪರ್ಧಿಸಿದ್ದು, ಬಾವಾ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲು ದೇವೇಗೌಡರು ಕರಾವಳಿಗೆ ಭೇಟಿ ನೀಡಿದ್ದರು
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…