Featured

ಮಂಗಳೂರು:ಮಾ.19 ಮತ್ತು 20ರಂದು ಸಹಕಾರಿ ಕ್ಷೇತ್ರದ ಅಧ್ಯಯನಕ್ಕೆ SCDCC ಬ್ಯಾಂಕ್‌ಗೆ ನಬಾರ್ಡ್ ನಿಯೋಜಿತ ಅಧ್ಯಯನ ತಂಡ ಭೇಟಿ : ಡಾ.ಎಂ.ಎನ್.ರಾಜೇಂದ್ರ ಕುಮಾರ್ -Vishwanews24

ಮಂಗಳೂರು:ಮಾ.19 ಮತ್ತು 20ರಂದು ಸಹಕಾರಿ ಕ್ಷೇತ್ರದ ಅಧ್ಯಯನಕ್ಕೆ SCDCC ಬ್ಯಾಂಕ್‌ಗೆ  ನಬಾರ್ಡ್ ನಿಯೋಜಿತ ಅಧ್ಯಯನ ತಂಡ ಭೇಟಿ : ಡಾ.ಎಂ.ಎನ್.ರಾಜೇಂದ್ರ ಕುಮಾರ್ -Vishwanews24

ಮಂಗಳೂರು: ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಸಂಘಗಳ ಆರ್ಥಿಕ ಸ್ಥಿತಿಗತಿ, ಸಹಕಾರ ಕ್ಷೇತ್ರದ ಹುಟ್ಟು, ಬೆಳವಣಿಗೆ ಸಾಧನೆಗಳ ಬಗ್ಗೆ ವಿಶೇಷ ಅಧ್ಯಯನ ನಡೆಸಲು ನಬಾರ್ಡ್ ನಿಯೋಜಿತ ಅಧ್ಯಯನ ತಂಡವು ಮಾ.19ರಂದು ನಗರದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ (ಎಸ್‌ಸಿಡಿಸಿಸಿ ಬ್ಯಾಂಕ್) ಭೇಟಿ ನೀಡಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್ ನೇತೃತ್ವದ ಅಧ್ಯಯನ ತಂಡವು ಮಾ.19 ಮತ್ತು 20ರಂದು ಎಸ್‌ಸಿಡಿಸಿಸಿ ಬ್ಯಾಂಕ್ ಸಹಿತ ಅವಿಭಜಿತ ದ.ಕ. ಜಿಲ್ಲೆಯ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಯ ಬಗ್ಗೆ ಅಧ್ಯಯನ ನಡೆಸಲಿದೆ. ಮಾ.19ರಂದು ಎಸ್‌ಸಿಡಿಸಿಸಿ ಬ್ಯಾಂಕಿಗೆ ಭೇಟಿ ನೀಡಲಿರುವ ತಂಡವು ಬ್ಯಾಂಕಿನ ಸಮಗ್ರ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ. ಬ್ಯಾಂಕಿನ ವ್ಯವಹಾರ ಚಟುವಟಿಕೆಗಳ ವೈವಿಧ್ಯೀಕರಣ, ಕ್ರೆಡಿಟ್ ಮಾನಿಟರಿಂಗ್ ಬಗ್ಗೆ ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣದ ಬಗ್ಗೆ ಹಾಗೂ ಕೃಷಿ ಸಾಲ ಮರುಪಾವತಿಯಲ್ಲಿ ಬ್ಯಾಂಕ್ ಕಳೆದ 25 ವರ್ಷಗಳಿಂದ ಶೇ.100ರ ಸಾಧನೆಯೂ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಅಧ್ಯಯನ ತಂಡ ಮಾಹಿತಿ ಪಡೆಯಲಿದೆ.

ಉಡುಪಿ : ಜಿಲ್ಲೆಯಲ್ಲಿ ಪಿನಾಯಿಲ್ ಮಾರಾಟದ ನೆಪದಲ್ಲಿ ಆಭರಣ ಕಳ್ಳತನ ಮಾಡುವ ಖತರ್ನಾಕ್ ಮಹಿಳಾ ಗ್ಯಾಂಗ್ -Vishwanews24

ಮಂಗಳೂರು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿದ್ಧಿ ನಾಯಕ ಸ್ವಸಹಾಯ ಸಂಘ, ವಿಘ್ನೇಶ್ವರ ಸ್ವಸಹಾಯ ಸಂಘ ಹಾಗೂ ಬಜ್ಪೆವ್ಯವಸಾಯ ಸೇವಾ ಸಹಕಾರಿ ಸಂಘಗಳಿಗೆ ಭೇಟಿ ನೀಡಲಿದೆ.

ಮಾ.20ರಂದು ಬಂಟ್ವಾಳ ತಾಲೂಕಿನ ಇಡ್ಕಿದು ವ್ಯವಸಾಯ ಸೇವಾ ಸಹಕಾರಿ ಸಂಘ, ಪುತ್ತೂರು ತಾಲೂಕಿನ ಕಾವು ವ್ಯವಸಾಯ ಸೇವಾ ಸಹಕಾರಿ ಸಂಘ, ಎಸ್‌ಸಿಡಿಸಿಸಿ ಬ್ಯಾಂಕ್ ಪುತ್ತೂರು ಶಾಖೆ, ಉಪ್ಪಿನಂಗಡಿ ವ್ಯವಸಾಯ ಸೇವಾ ಸಹಕಾರಿ ಸಂಘ, ಉಡುಪಿ ತಾಲೂಕಿನ ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘ, ಪಡುಬಿದ್ರೆ ವ್ಯವಸಾಯ ಸೇವಾ ಸಹಕಾರಿ ಸಂಘ, ಕಾಪು ನಾಗಸನ್ನಿಧಿ ಸ್ವಸಹಾಯ ಸಂಘಕ್ಕೆ ಭೇಟಿ ನೀಡಿ ಅದರ ಕಾರ್ಯನಿರ್ವಹಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ.

ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್‌ ಗೋಯಲ್‌ -Vishwanews24

ರಾಜ್ಯದ ಧ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳ ಅಧ್ಯಕ್ಷರುಗಳು/ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರು ಸೇರಿದಂತೆ 24 ಮಂದಿ ಈ ಅಧ್ಯಯನ ತಂಡದಲ್ಲಿದ್ದಾರೆ. ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್ ನೇತೃತ್ವದ ಈ ಅಧ್ಯಯನ ತಂಡದಲ್ಲಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ ಹರೀಶ್, ಬಳ್ಳಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಟಿ. ಎಂ. ಚಂದ್ರಶೇಖರಯ್ಯ, ದಾವಣಗೆರೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಜಗದೀಶಪ್ಪ ಬಣಕಾರ್, ಧಾರವಾಡ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಲಿಂಗರಾಜ ಎಸ್. ಚಪ್ಪರದಳ್ಳಿ, ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ. ಅಶ್ವತ್, ಚಿತ್ರದುರ್ಗ ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಮಾಜಿ ಸಚಿವ ಸುಧಾಕರ ಡಿ., ಬಿಜಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಸಚಿವ ಶಿವಾನಂದ ಎಸ್. ಪಾಟೀಲ, ಕೊಡಗು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ, ರಾಯಚೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಹಾಲಪ್ಪ ಬಸಪ್ಪ ಆಚಾರ್, ಅಪೆಕ್ಸ್ ಬ್ಯಾಂಕ್ ಸಿಇಒ ಸಿ.ಎನ್.ದೇವರಾಜ್, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚೆನ್ನೀರಪ್ಪ, ಬೆಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಹನುಮಂತಯ್ಯ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯ ಕುಮಾರ್ ಸರ್‌ನಾಯ್ಕ, ಹಾಸನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ನಾಗರಾಜ್, ಕಲ್ಬುರ್ಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜ್ ಕುಮಾರ್ ಪಾಟೀಲ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಎಸ್.ಆರ್. ಗಿರೀಶ್, ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಂಚಪ್ಪಯ್ಯ, ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಮಹಾಬಲ, ಕಲ್ಮನೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್.ಕೆ, ಕಲ್ಮನೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಮೇಘರಾಜ್, ಅಪೆಕ್ಸ್ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ಎನ್.ಎಸ್ ಕೃಷ್ಣಮೂರ್ತಿ ಪಾಲ್ಗೊಳ್ಳಲಿದ್ದಾರೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ; ಮುಂದಿನವಾರ ಢಾಕಾಗೆ ಪ್ರಧಾನಿ ಮೋದಿ ಭೇಟಿ ,3 ಒಡಂಬಡಿಕೆಗೆ ಸಹಿ ಸಾಧ್ಯತೆ -Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

15 minutes ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

2 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

2 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago