ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೃಹತ್ ಮಾವಿನ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ.
ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ರಹಿಮಾನ್, ಅಬ್ಬಾಸ್ ಹಾಗೂ ರಮ್ಲಾನ್ ಕುಳಿತಿದ್ದರು. ಈ ವೇಳೆ ಮರ ಬೀಳುವ ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ದೂರ ಹೋಗಿದ್ದಾರೆ.
ಅಷ್ಟರಲ್ಲೇ ಮಾವಿನ ಮರ ಕಾರಿನ ಮೇಲೆ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡು ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೆಡ್ ಅಲರ್ಟ್ ಜಾರಿ: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…