Featured

ಮಂಗಳೂರು:ರಾಜ್ಯದ ಮೀನುಗಾರಿಕಾ ಇಲಾಖೆಯಲ್ಲಿ 10 ಸಾವಿರ ಉದ್ಯೋಗ : ನೆಹರೂ ಮೈದಾನದಲ್ಲಿ ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಶನಿವಾರ 74ನೇ ಸರಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರಧ್ವರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ರಾಜ್ಯದ ಮೀನುಗಾರಿಕಾ ಇಲಾಖೆಯಲ್ಲಿ 10 ಸಾವಿರ ಉದ್ಯೋಗಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಜನಸ್ನೇಹಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪುವಂತೆ ಮಾಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಪ್ರತಿಯೊಬ್ಬರು ಇದರ ಬಳಕೆ ಮಾಡಬೇಕು. ಸುಮಾರು 5 ಕೋಟಿ ಜನರು ಆಯುಷ್ಮಾನ್ ಭಾರತ್, ಕಿಸಾನ್‌‌‌ ಸಮ್ಮಾನ್‌‌ ಮುಂತಾದ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡಿದ್ದಾರೆ. ಬಿ.ಎಸ್‌‌. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ರೈತರ ಪರವಾಗಿದ್ದು, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಾವು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ 2020-21 ಅನ್ನು ಸಹ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪಡಿತರ ಹಾಗೂ ಆಹಾರ ಕಿಟ್‌‌ಗಳನ್ನು ಪೂರೈಕೆ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಧಾರ್ಮಿಕ ದತ್ತಿ ಇಲಾಖೆಯೂ ಕೂಡ ಅಗತ್ಯ ಆಹಾರವನ್ನು ಒದಗಿಸಿದೆ. ಇದಲ್ಲದೇ, ಹಲವಾರು ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜನರ ಪ್ರತಿನಿಧಿಗಳು ಆಹಾರ ಕಿಟ್ ಮತ್ತು ಔಷಧಿಗಳನ್ನು ವಿತರಿಸುವ ಮೂಲಕ ಲಾಕ್‌ಡೌನ್‌‌ ಸಮಯದಲ್ಲಿ ಜನರಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಜತೆಗೆ ನಾವು ಅಂತರ ರಾಜ್ಯ ಹಾಗೂ ಅಂತರ ರಾಷ್ಟ್ರೀಯ ಪ್ರಯಾಣಿಕರ ಬರುವಿಕೆಯನ್ನು ನಿರ್ವಹಿಸಿದ್ದೇವೆ ಎಂದರು.

ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ₹2,000 ಕೋಟಿ ಹಂಚಿಕೆ ಮಾಡಲಾಗಿದೆ. ಇದರಲ್ಲಿ ₹338 ಕೋಟಿ ಬಿಡುಗಡೆ ಮಾಡಲಾಗಿದ್ದು, ₹100 ಕೋಟಿ ವೆಚ್ಚದ ಕೆಲಸಗಳು ಈವರೆಗೆ ಪೂರ್ಣಗೊಂಡಿವೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಭಿವೃದ್ಧಿಗಾಗಿ ₹5.83 ಕೋಟಿ ಬಳಸಲಾಗಿದೆ. ₹2.31 ಕೋಟಿ ವೆಚ್ಚದಲ್ಲಿ ಲೇಡಿಗೋಷನ್ ಆಸ್ಪತ್ರೆಯ ಎರಡನೇ ಮಹಡಿಯ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಾಸಕರಾದ ವೇದವ್ಯಾಸ್ ಕಾಮತ್‌, ಡಾ.ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್‌‌ಸಿ ಪ್ರತಾಪ್ ಸಿಂಹ ನಾಯಕ್, ಪೊಲೀಸ್ ಆಯುಕ್ತ ವಿಕಾಸ್‌‌ ಕುಮಾರ್, ಮೇಯರ್ ದಿವಾಕರ್ ಮತ್ತು ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

8 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

8 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

8 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

8 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

8 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

9 hours ago