ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಶನಿವಾರ 74ನೇ ಸರಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರಧ್ವರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ರಾಜ್ಯದ ಮೀನುಗಾರಿಕಾ ಇಲಾಖೆಯಲ್ಲಿ 10 ಸಾವಿರ ಉದ್ಯೋಗಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
ಜನಸ್ನೇಹಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪುವಂತೆ ಮಾಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಪ್ರತಿಯೊಬ್ಬರು ಇದರ ಬಳಕೆ ಮಾಡಬೇಕು. ಸುಮಾರು 5 ಕೋಟಿ ಜನರು ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ಮುಂತಾದ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ರೈತರ ಪರವಾಗಿದ್ದು, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಾವು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ 2020-21 ಅನ್ನು ಸಹ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪಡಿತರ ಹಾಗೂ ಆಹಾರ ಕಿಟ್‌ಗಳನ್ನು ಪೂರೈಕೆ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಧಾರ್ಮಿಕ ದತ್ತಿ ಇಲಾಖೆಯೂ ಕೂಡ ಅಗತ್ಯ ಆಹಾರವನ್ನು ಒದಗಿಸಿದೆ. ಇದಲ್ಲದೇ, ಹಲವಾರು ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜನರ ಪ್ರತಿನಿಧಿಗಳು ಆಹಾರ ಕಿಟ್ ಮತ್ತು ಔಷಧಿಗಳನ್ನು ವಿತರಿಸುವ ಮೂಲಕ ಲಾಕ್‌ಡೌನ್ ಸಮಯದಲ್ಲಿ ಜನರಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಜತೆಗೆ ನಾವು ಅಂತರ ರಾಜ್ಯ ಹಾಗೂ ಅಂತರ ರಾಷ್ಟ್ರೀಯ ಪ್ರಯಾಣಿಕರ ಬರುವಿಕೆಯನ್ನು ನಿರ್ವಹಿಸಿದ್ದೇವೆ ಎಂದರು.
ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ₹2,000 ಕೋಟಿ ಹಂಚಿಕೆ ಮಾಡಲಾಗಿದೆ. ಇದರಲ್ಲಿ ₹338 ಕೋಟಿ ಬಿಡುಗಡೆ ಮಾಡಲಾಗಿದ್ದು, ₹100 ಕೋಟಿ ವೆಚ್ಚದ ಕೆಲಸಗಳು ಈವರೆಗೆ ಪೂರ್ಣಗೊಂಡಿವೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಭಿವೃದ್ಧಿಗಾಗಿ ₹5.83 ಕೋಟಿ ಬಳಸಲಾಗಿದೆ. ₹2.31 ಕೋಟಿ ವೆಚ್ಚದಲ್ಲಿ ಲೇಡಿಗೋಷನ್ ಆಸ್ಪತ್ರೆಯ ಎರಡನೇ ಮಹಡಿಯ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್, ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಮೇಯರ್ ದಿವಾಕರ್ ಮತ್ತು ಇತರರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…