Featured

ಮಂಗಳೂರು:ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಕೇಂದ್ರ ಸರಕಾರದಿಂದ ಅವಮಾನ: ವಿನಯ ಕುಮಾರ್ ಸೊರಕೆ  – vishwanews24

ಮಂಗಳೂರು:ಕೇಂದ್ರ ಸರಕಾರ ಪಂಚಾಯತ್‌ನ ಹಕ್ಕನ್ನು ಕಸಿದುಕೊಂಡಿದೆ: ವಿನಯ ಕುಮಾರ್ ಸೊರಕೆ

‘ಮನರೇಗಾ ಬಚಾವೋ ಸಂಗ್ರಾಮ್‌‘ನ ನಾಲ್ಕನೇ ದಿನದ ಪಾದಯಾತ್ರೆ

ಮಂಗಳೂರು: ಕೇಂದ್ರ ಸರಕಾರ ಮನರೇಗಾ ಬದಲು ಪಂಚಾಯತ್ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಆ ಮೂಲಕ ಪಂಚಾಯತ್‌ನ ಹಕ್ಕನ್ನು ಕಸಿದು ಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಮನರೇಗಾ ಬಚಾವೋ ಸಂಗ್ರಾಮ್‌‘ನ ನಾಲ್ಕನೇ ದಿನದ ಪಾದಯಾತ್ರೆಗೆ ಗುರುವಾರ ನಗರದ ಲಾಲ್ ಬಾಗ್ ನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: 

ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಜಾರಿಗೆ ತಂದವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ. ಆದರೆ ಗ್ರಾಮೀಣ ಯೋಜನೆಯೊಂದಕ್ಕೆ ಇಟ್ಟಿದ್ದ ಅವರ ಹೆಸರನ್ನೇ ಕೇಂದ್ರ ಸರಕಾರ ತೆಗೆದು ಹಾಕಿದೆ. ಆ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಅವಮಾನ ಮಾಡಿದೆ ಎಂದರು.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್. ಲೋಬೊ, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಮಾಜಿ ಮೇಯರ್‌ಗಳಾದ ಎಂ. ಶಶಿಧರ ಹೆಗ್ಡೆ , ಭಾಸ್ಕರ ಕೆ ಮತ್ತು ಕೆ.ಅಶ್ರಫ್, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಜ್ ,ಪ್ರಮುಖರಾದ ಎಂ.ಎಸ್.ಮುಹಮ್ಮದ್, ಸುರೇಶ್ ಬಳ್ಳಾಲ್, ಪ್ರಕಾಶ್ ಸಾಲ್ಯಾನ್, ಎ.ಸಿ. ವಿನಯರಾಜ್, ಪ್ರವೀಣ್ ಚಂದ್ರ ಆಳ್ವ, ಲ್ಯಾನ್ಸ್ ಲಾಟ್ ಪಿಂಟೊ, ಶುಭೋದಯ ಆಳ್ವ, ನವೀನ್ ಡಿ‘ಸೋಜ, ಡಿ.ಕೆ.ಅಶೋಕ್, ಸಂತೋಷ್ ಕುಮಾರ್, ಟಿ.ಕೆ.ಸುಧೀರ್, ಡೆನಿಸ್ ಡಿ ಸಿಲ್ವ, ಜೋಕಿಂ ಡಿ ಸೋಜ, ಅಬ್ಬಾಸ್ ಅಲಿ, ಸುಹಾನ ಆಳ್ವ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ: 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

1 day ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

1 day ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

1 day ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

1 day ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

1 day ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

1 day ago