ಮಂಗಳೂರು: ಕೇಂದ್ರ ಸರಕಾರ ಮನರೇಗಾ ಬದಲು ಪಂಚಾಯತ್ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಆ ಮೂಲಕ ಪಂಚಾಯತ್‌ನ ಹಕ್ಕನ್ನು ಕಸಿದು ಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಮನರೇಗಾ ಬಚಾವೋ ಸಂಗ್ರಾಮ್‘ನ ನಾಲ್ಕನೇ ದಿನದ ಪಾದಯಾತ್ರೆಗೆ ಗುರುವಾರ ನಗರದ ಲಾಲ್ ಬಾಗ್ ನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಇದನ್ನೂ ಓದಿ:
ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಜಾರಿಗೆ ತಂದವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ. ಆದರೆ ಗ್ರಾಮೀಣ ಯೋಜನೆಯೊಂದಕ್ಕೆ ಇಟ್ಟಿದ್ದ ಅವರ ಹೆಸರನ್ನೇ ಕೇಂದ್ರ ಸರಕಾರ ತೆಗೆದು ಹಾಕಿದೆ. ಆ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಅವಮಾನ ಮಾಡಿದೆ ಎಂದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್. ಲೋಬೊ, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಮಾಜಿ ಮೇಯರ್‌ಗಳಾದ ಎಂ. ಶಶಿಧರ ಹೆಗ್ಡೆ , ಭಾಸ್ಕರ ಕೆ ಮತ್ತು ಕೆ.ಅಶ್ರಫ್, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಜ್ ,ಪ್ರಮುಖರಾದ ಎಂ.ಎಸ್.ಮುಹಮ್ಮದ್, ಸುರೇಶ್ ಬಳ್ಳಾಲ್, ಪ್ರಕಾಶ್ ಸಾಲ್ಯಾನ್, ಎ.ಸಿ. ವಿನಯರಾಜ್, ಪ್ರವೀಣ್ ಚಂದ್ರ ಆಳ್ವ, ಲ್ಯಾನ್ಸ್ ಲಾಟ್ ಪಿಂಟೊ, ಶುಭೋದಯ ಆಳ್ವ, ನವೀನ್ ಡಿ‘ಸೋಜ, ಡಿ.ಕೆ.ಅಶೋಕ್, ಸಂತೋಷ್ ಕುಮಾರ್, ಟಿ.ಕೆ.ಸುಧೀರ್, ಡೆನಿಸ್ ಡಿ ಸಿಲ್ವ, ಜೋಕಿಂ ಡಿ ಸೋಜ, ಅಬ್ಬಾಸ್ ಅಲಿ, ಸುಹಾನ ಆಳ್ವ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…