Featured

ಮಂಗಳೂರು:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ – vishwanews24

ಮಂಗಳೂರು:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ

ನ್ಯೂಯಾರ್ಕ್‌ಗೆ ಭೇಟಿ ನೀಡಿರುವ ಭಾರತದ 15 ಮಂದಿಯ ಸರ್ವಪಕ್ಷ ನಿಯೋಗದಲ್ಲಿ ಸ್ಥಾನ ಪಡೆದಿರುವ ದ.ಕ. ಸಂಸದರು

ಮಂಗಳೂರು: ದಕ್ಷಿಣ ಕನ್ನಡ‌ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕ ದೇಶಕ್ಕೆ ತೆರಳಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಈ ಅಧಿವೇಶನದಲ್ಲಿ ಭಾಗವಹಿಸಲಿದೆ. ಆ ಪೈಕಿ ಪಿಪಿ ಚೌಧರಿ ನೇತೃತ್ವದ ಮೊದಲ ನಿಯೋಗವು ಅ.8ರಿಂದ 14ರವರೆಗೆ ನಡೆಯುವ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಈ ತಂಡದಲ್ಲಿ ಕರ್ನಾಟಕದಿಂದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಸಂಸದರಾಗಿರುವ ಅನಿಲ್ ಬಲೂನಿ, ಡಾ. ನಿಶಿಕಾಂತ್ ದುಬೆ, ಉಜ್ವಲ್ ನಿಕಮ್, ಎಸ್ ಫಾಂಗ್ನಾನ್ ಕೊನ್ಯಾಕ್, ಡಾ. ಮೇಧಾ ವಿಶ್ರಮ್ ಕುಲಕರ್ಣಿ, ಪೂನಂ ಬೆನ್ ಮಾದಮ್, ವಂಶಿ ಕೃಷ್ಣ ಗದ್ದಾಮ್, ವಿವೇಕ್ ತಂಖಾ, ಡಾ. ಟಿ ಸುಮತಿ, ಎನ್.ಕೆ. ಪ್ರೇಮಚಂದ್ರನ್, ಕುಮಾರಿ ಸೆಲ್ಜಾ, ಮಾತುಕುಮಿಲ್ಲಿ ಶ್ರೀಭರತ್ ಮತ್ತು ರಾಜೀವ್ ರೈ ಅವರು ನಿಯೋಗದಲ್ಲಿ ನ್ಯೂಯಾರ್ಕ್‌ಗೆ ತೆರಳಿದ್ದಾರೆ.

ಸುಮಾರು ಎರಡು ದಶಕಗಳ ಬಳಿಕ ಭಾರತದ ಸಂಸದೀಯ ರಾಜತಾಂತ್ರಿಕತೆಯನ್ನು ಪುನರುಜ್ಜೀವಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಈ ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಉತ್ತಮಪಡಿಸುವುದು, ಜಾಗತಿಕ ಮಟ್ಟದ ಸಭೆಯಲ್ಲಿ ಭಾರತವನ್ನು ಅಧಿಕಾರಿಗಳ ಹೊರತಾಗಿ ಪ್ರತಿನಿಧಿಸುವುದು, ವಿಶ್ವಸಂಸ್ಥೆಯಲ್ಲಿ ಸಂಸದೀಯ ಪ್ರಜಾಪ್ರಭುತ್ವ ದೇಶದ ಪ್ರತಿನಿಧಿಗಳಾಗಿ ಪ್ರಜಾತಂತ್ರದ ಮೌಲ್ಯಗಳನ್ನು ಪ್ರಚುರಪಡಿಸುವುದು ಈ ನಿಯೋಗದ ಉದ್ದೇಶವಾಗಿದೆ. 15 ಸಂಸದರ ಎರಡನೇ ನಿಯೋಗವು ಈ ತಿಂಗಳ ಕೊನೆಯಲ್ಲಿ ಬಿಜೆಪಿ ಸಂಸದೆ ಡಿ. ಪುರಂದೇಶ್ವರಿ ನೇತೃತ್ವದಲ್ಲಿ ನ್ಯೂಯಾರ್ಕ್ ಗೆ ಪ್ರಯಾಣಿಸಲಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

7 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

8 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

8 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

8 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

8 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago