Featured

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ

ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ ‘ಸೆಲಿನಾ ಟ್ರಾವೆಲ್ಸ್’ ಬಸ್‌ಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕರಪತ್ರ ಸಂಪೂರ್ಣ ನಕಲಿ ಮತ್ತು ಸುಳ್ಳು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಲಾಗುತ್ತಿದ್ದ ಕರಪತ್ರದಲ್ಲಿ, ಸೆಲಿನಾ ಟ್ರಾವೆಲ್ಸ್ ಬಸ್‌ಗಳಲ್ಲಿ ಅಸಭ್ಯ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳನ್ನು ಮಾಡಲಾಗಿತ್ತು. ವಿಶೇಷವಾಗಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಈ ಬಸ್‌ಗಳಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿತ್ತು. ಅಲ್ಲದೆ, ಈ ಕುರಿತು ನಗರ ಪೊಲೀಸ್ ಠಾಣೆಯಿಂದಲೇ ಸೂಚನೆ ನೀಡಲಾಗಿದೆ ಎಂದು ತಪ್ಪಾಗಿ ಬಿಂಬಿಸಲಾಗಿತ್ತು. ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಉದ್ದೇಶದಿಂದ ತುರ್ತು ಪೊಲೀಸ್ ಸಹಾಯವಾಣಿ ಸಂಖ್ಯೆ ‘100’ನ್ನೂ ಕರಪತ್ರದಲ್ಲಿ ಬಳಸಲಾಗಿತ್ತು.

ಈ ಕರಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ವರದಿಗಾರರು ಡಿಕೆ ಸಿಟಿ ಅಂಡ್ ಡಿಸ್ಟ್ರಿಕ್ಟ್ ಪೊಲೀಸ್ & ಮೀಡಿಯಾ ವಾಟ್ಸಪ್ ಗುಂಪಿನಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನ ಸೆಳೆದಿದ್ದರು. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್, ಪೊಲೀಸ್ ಇಲಾಖೆಯಿಂದ ಇಂತಹ ಯಾವುದೇ ಪ್ರಕಟಣೆ ಅಥವಾ ಸೂಚನೆ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ನಡುವೆ, ಈ ನಕಲಿ ಕರಪತ್ರದ ಕುರಿತು ಸೆಲಿನಾ ಟ್ರಾವೆಲ್ಸ್ ಸಂಸ್ಥೆಯು ದೂರು ದಾಖಲಿಸಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರಲ್ಲಿ ಭೀತಿ ಮತ್ತು ಗೊಂದಲ ಸೃಷ್ಟಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ಮುದ್ರೆ ಅಥವಾ ಸಹಿ ಇಲ್ಲದೆ ಹರಿದಾಡುವ ಇಂತಹ ಎಚ್ಚರಿಕೆ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು. ಅವುಗಳನ್ನು ಹಂಚುವ ಮೂಲಕ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

4 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

7 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

7 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

8 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

8 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

8 hours ago