ಮಂಗಳೂರು: ಅತಿವೇಗದ ಬಿಎಂಡಬ್ಲ್ಯೂ ಕಾರು ರಸ್ತೆ ವಿಭಜಕದ ಮೇಲೆ ಹಾರಿ, ರಸ್ತೆಯ ಇನ್ನೊಂದು ಭಾಗದಲ್ಲಿನ ಸ್ಕೂಟಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರೀತಿ ಮನೋಜ್ ಅವರ ಮೆದುಳು ನಿಷ್ಕ್ರೀಯಗೊಂಡಿದ್ದು, ಈ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡವ ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ನಗರದ ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ ಅವರು ಎ. 9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಬಿಎಂಡಬ್ಲ್ಯು ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಏ.9 ರ ಶನಿವಾರದಂದು ಮಧ್ಯಾಹ್ನ 1.20ರ ಸುಮಾರಿಗೆ ಬಲ್ಲಾಳ್ ಭಾಗ್ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕನ ವೇಗದ ಚಾಲನೆಗೆ ಕಾರು ಡಿವೈಡರ್ ಮೇಲಿಂದ ಹಾರಿ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಅತಿವೇಗದ ಚಾಲನೆಯಿಂದ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕ ದಾಟಿ ಮತ್ತೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿಗೆ ಡಿಕ್ಕಿ ಹೊಡೆದಿತ್ತು.ಅಪಘಾತದದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟರ್ ಸವಾರೆ 47ರ ಹರೆಯ ಪ್ರೀತಿ ಮನೋಜ್ ಎಂಬುವವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಮೆದುಳು ನಿಷ್ಕ್ರೀಯಗೊಂಡ ಹಿನ್ನಲೆಯಲ್ಲಿ ಪ್ರೀತಿ ಅವರ ಅಂಗಾಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…