Featured

ಮಂಗಳೂರು;ಸ್ಕೂಟಿಗೆ ಬಿಎಂಡಬ್ಲ್ಯು ಕಾರು ಢಿಕ್ಕಿ: ಗಾಯಾಳು ಮಹಿಳೆಯ ಬ್ರೈನ್ ಡೆಡ್ – ಅಂಗಾಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ – Vishwanews24

ಏ.9 ರ ಶನಿವಾರ ಬಲ್ಲಾಳ್‌ ಭಾಗ್ ಜಂಕ್ಷನ್‌ನಲ್ಲಿ  ಅಪಘಾತ ..

ಅಪಘಾತದದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ್ದ ಸ್ಕೂಟರ್ ಸವಾರೆ ಪ್ರೀತಿ ಮನೋಜ್

ಮಂಗಳೂರು: ಅತಿವೇಗದ ಬಿಎಂಡಬ್ಲ್ಯೂ ಕಾರು ರಸ್ತೆ ವಿಭಜಕದ ಮೇಲೆ ಹಾರಿ, ರಸ್ತೆಯ ಇನ್ನೊಂದು ಭಾಗದಲ್ಲಿನ ಸ್ಕೂಟಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರೀತಿ ಮನೋಜ್ ಅವರ ಮೆದುಳು ನಿಷ್ಕ್ರೀಯಗೊಂಡಿದ್ದು, ಈ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡವ ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ನಗರದ ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ ಅವರು ಎ. 9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಬಿಎಂಡಬ್ಲ್ಯು ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌.

ಏ.9 ರ ಶನಿವಾರದಂದು ಮಧ್ಯಾಹ್ನ 1.20ರ ಸುಮಾರಿಗೆ ಬಲ್ಲಾಳ್‌ ಭಾಗ್ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕನ ವೇಗದ ಚಾಲನೆಗೆ ಕಾರು ಡಿವೈಡರ್ ಮೇಲಿಂದ ಹಾರಿ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಅತಿವೇಗದ ಚಾಲನೆಯಿಂದ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕ ದಾಟಿ ಮತ್ತೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿಗೆ ಡಿಕ್ಕಿ ಹೊಡೆದಿತ್ತು.ಅಪಘಾತದದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟರ್ ಸವಾರೆ 47ರ ಹರೆಯ ಪ್ರೀತಿ ಮನೋಜ್ ಎಂಬುವವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಮೆದುಳು ನಿಷ್ಕ್ರೀಯಗೊಂಡ ಹಿನ್ನಲೆಯಲ್ಲಿ ಪ್ರೀತಿ ಅವರ ಅಂಗಾಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

Vishwa News 24

Recent Posts

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

41 minutes ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 hour ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

3 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

3 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

6 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

6 hours ago