ಮಂಗಳೂರು: ಟಿಕೆಟ್ ಗೆ ಹೆಚ್ಚುವರಿ ದರ ಪಡೆಯುವಂತಹ ಖಾಸಗಿ ಬಸ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಚ್ಚರಿಕೆ ನೀಡಿದ್ದಾರೆ.
ಹೆಚ್ಚುವರಿ ದರ ಪಡೆಯುವ ಬಸ್‌ನ ನೋಂದಣಿ ಸಂಖ್ಯೆ ಹಾಗೂ ರೂಟ್ ಮಾಹಿತಿಯನ್ನು ಲಿಖಿತವಾಗಿ, ಪುರಾವೆಯೊಂದಿಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಗೆ ಸಲ್ಲಿಸಬೇಕು. ಅಂತಹ ವಾಹನಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಮೋಟಾರು ವಾಹನ ಕಾಯ್ದೆ ಹಾಗೂ ರಾಜ್ಯ ಸರಕಾರದ ಅಧಿಸೂಚನೆಯ ಪ್ರಕಾರ ನಗರ ಮತ್ತು ಗ್ರಾಮಾಂತರ ಪ್ರಯಾಣ ದರ ನಿಗದಿಪಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ. ಕೋವಿಡ್-19 ಅವಧಿಯಲ್ಲಿ ದ.ಕ. ಸಾರಿಗೆ ಪ್ರಾಧಿಕಾರವು ನಗರ ಮತ್ತು ಗ್ರಾಮಾಂತರ ಪ್ರಯಾಣ ದರ ಏರಿಕೆ ಮಾಡಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…