ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ; ಮೂವರ ಬಂಧನ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮೂರು ವಿವಿಧ ಪ್ರಕರಣದಲ್ಲಿ ಮಂಗಳೂರು‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದೂವರೆ ಕೆ ಜಿ ಚಿನ್ನವನ್ನು ಕಸ್ಟಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 63 ಲಕ್ಷ 73 ಸಾವಿರ ಎಂದು ಅಂದಾಜಿಸಲಾಗಿದೆ.

ಜ. 6 ಮತ್ತು 7 ರಂದು ದುಬಾಯಿನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಈ ಚಿನ್ನವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಜ. 6 ರ ವಿಮಾನದಲ್ಲಿದ್ದ ಪ್ರಯಾಣಿಕನಿಂದ 336.7 ಗ್ರಾಮ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 13.43 ಲಕ್ಷ ಎಂದು ಅಂದಾಜಿಸಲಾಗಿದೆ.

ಜ.7ರಂದು ದುಬಾಯಿನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಓರ್ವ ಪ್ರಯಾಣಿಕನಿಂದ 21.24 ಲಕ್ಷ ರೂ ಮೌಲ್ಯದ 523 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಪ್ರಯಾಣಿಕನಿಂದ 29.06 ಲಕ್ಷ ರೂ ಮೌಲ್ಯದ 716 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.