ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಹಿಂದೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕೂಡಾ ಇದೇ ಒತ್ತಾಯವನ್ನು ಮಾಡಿದ್ದಾರೆ. ಹರೀಶ್ ಕುಮಾರ್ ಈ ವಿಚಾರವಾಗಿ ಸರಕಾರವನ್ನು ಬಲವಾಗಿ ಒತ್ತಾಯಿಸಿದ್ದು,ಈ ಸಂಬಂಧ ಹೋರಾಟಕ್ಕೂ ಸಿದ್ಧವಾಗಿದ್ದೇನೆ ಎಂದು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಈ ಪ್ರಸ್ತಾಪವನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸಲಾಗಿದ್ದು, ಸರಕಾರ ಈ ಪ್ರಸ್ತಾವನೆಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕರಾವಳಿಯಲ್ಲಿ ಕೋಟಿ-ಚೆನ್ನಯ ಹೆಸರಿಗೆ ಎಲ್ಲಾ ಸಮುದಾಯಗಳ ಒಲವೂ ಇದೆ. ಈ ಕಾರಣಕ್ಕೆ ಸರಕಾರ ಕೇಂದ್ರಕ್ಕೆ ಈ ಹೆಸರೊಂದನ್ನೇ ಕಳುಹಿಸುವುದು ಸೂಕ್ತ ಎಂದು ಸಲಹೆಯನ್ನೂ ಶಾಸಕ ಹರೀಶ್ ಕುಮಾರ್ ಸರಕಾರಕ್ಕೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯೂ ಹರೀಶ್ ಕುಮಾರ್ ಆಗಿದ್ದಾರೆ ಎನ್ನುವ ಮಾತುಗಳೂ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…