ಮಂಗಳೂರು: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ದೇಶಾದ್ಯಂತ ವ್ಯಾಪಕವಾಗಿ ಹಬ್ಬಲಾರಂಭಿಸಿದ್ದು, ಸೋಂಕು ಪೀಡಿತ ಸಂಖ್ಯೆ ಶತಕ ದಾಟಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಇನ್ನು ಕರಾವಳಿಯಲ್ಲೂ ಶಂಕಿತ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ತೆರಳುವ ಹಲವು ವಿಮಾನಯಾನ ಸೇವೆಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ಕುರಿತು ಸ್ಪಷ್ಟಪಡಿಸಿರುವ ಏರ್ ಇಂಡಿಯಾದ ಮಂಗಳೂರು ವಿಭಾಗದ ಅಧಿಕಾರಿ” ಭಾರತ ಸರಕಾರದ ಸೂಚನೆಯ ಮೇರೆಗೆ ಹಲವು ವಿಮಾನ ಯಾನ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಸೌದಿ ಅರೇಬಿಯಾ, ಕುವೈತ್, ಕತಾರ್ ಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನಯಾನ ಸೇವೆ ಸ್ಥಗಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.
ಆದರೂ , ದುಬೈ, ಅಬುಧಾಬಿ, ಮಸ್ಕತ್ ಗೆ ಏರ್ ಇಂಡಿಯಾ ಸಂಸ್ಥೆಯ ವಿಮಾನ ಸೇವೆ ಎಂದಿನಂತೆಯೇ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…