ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1ರಿಂದ 15ರ ತನಕ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ ಎಂದರು. ಇನ್ನು ರಜೆಯಲ್ಲಿ ಬದಲಾವಣೆ ಮಾಡಿರುವುದರಿಂದ ಮಂಗಳೂರು ದಸರಾದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಿಗೆ ಅವಕಾಶ ದೊರೆಯಲಿದೆ ಎಂದರು.
ಮೈಸೂರಿನಂತೆ ಮಂಗಳೂರಿನಲ್ಲಿಯೂ ದಸರಾ ಹಬ್ಬವನ್ನು ವೈಭವದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿದಸರಾ ರಜೆಯನ್ನು ನವರಾತ್ರಿ ಆರಂಭದಿಂದ ನೀಡಬೇಕೆಂದು ಜಿಲ್ಲೆಯ ಜನತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಶಾಸಕರ ಮನವಿಯನ್ನು ಪುರಸ್ಕರಿಸಿದ ಸಚಿವರು ಶಿಕ್ಷಣ ಇಲಾಖೆಗೆ ಮಧ್ಯಾವಧಿ ರಜೆಯನ್ನು ಪರಿಷ್ಕರಿಸುವಂತೆ ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿಜಿಲ್ಲೆಯ ಎಲ್ಲಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅಕ್ಟೋಬರ್ 1ರಿಂದ 15ರ ವರೆಗೆ ರಜೆ ಸಾರಲಾಗಿದೆ. ಅಕ್ಟೋಬರ್ 16ರಂದು ಶಾಲೆ ಪುನಾರಂಭಗೊಳ್ಳಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…