Featured

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ – vishwanews24

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಣಂಬೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರೆಸ್ಟೋರೆಂಟ್‌ಗೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಅವರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲು ಹಾಗೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಕೈಗೊಳ್ಳಲು ಪಣಂಬೂರು ಪೊಲೀಸ್ ಠಾಣೆಯಲ್ಲಿ ಕ್ರಮ ಆರಂಭಿಸಲಾಗಿದೆ.

ಪಣಂಬೂರು ಪೊಲೀಸ್ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.

Vishwa News 24

Recent Posts

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

13 minutes ago

ಕಡಬ : ಪಿಕಪ್ – ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…

2 hours ago

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಲ್ಪೆಗೆ ಆಗಮಿಸಿದ ಭೂಗತ ಪಾತಕಿ ರವಿ ಪೂಜಾರಿ – vishwanews24

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಲ್ಪೆಗೆ ಆಗಮಿಸಿದ ಭೂಗತ ಪಾತಕಿ ರವಿ ಪೂಜಾರಿ ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ…

2 hours ago

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ : ನೋಂದಣಿಗೆ ಸೂಚನೆ – vishwanews24

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ : ನೋಂದಣಿಗೆ ಸೂಚನೆ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ…

2 hours ago

ಮೈಸೂರಿಗೆ ಪ್ರಧಾನಿ ಮೋದಿ : ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ – vishwanews24

ಮೈಸೂರಿಗೆ ಪ್ರಧಾನಿ ಮೋದಿ : ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೈಸೂರು ನಗರದ ಶಶಿರಂಜನ್…

22 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ – vishwanews24

ಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಆರಂಭಿಸಲಿರುವ…

22 hours ago