Featured

ಮಂಗಳೂರು : ಅಕ್ರಮ ಕಸಾಯಿಖಾನೆ ಆರೋಪ – ಸ್ಥಳಕ್ಕೆ ಮೇಯರ್  ದಿಢೀರ್ ಭೇಟಿ , ಪರಿಶೀಲನೆ – vishwanews24

ಮಂಗಳೂರು : ಅಕ್ರಮ ಕಸಾಯಿಖಾನೆ ಆರೋಪ – ಸ್ಥಳಕ್ಕೆ ಮೇಯರ್  ದಿಢೀರ್ ಭೇಟಿ

ಮಂಗಳೂರು: ನಗರದ ಕುದ್ರೋಳಿಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿರುವ ಆರೋಪದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕುದ್ರೋಳಿಯಲ್ಲಿ ಕಾರ್ಯಾಚರಿಸುತ್ತಿದ್ದ ಈ ಕಸಾಯಿಖಾನೆಯನ್ನು ಮಾಲಿನ್ಯ ನಿಯಂತ್ರಣ ಮಂಡಳಿಯ ಸೂಚನೆ ಮೇರೆಗೆ ಕೆಲವು ವರ್ಷಗಳ ಹಿಂದೆಯೇ ಸ್ಥಗಿತಗೊಳಿಸಲಾಗಿತ್ತು. ಆದರೆ ಇತ್ತೀಚೆಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮೇಯರ್ ಅವರಿಗೆ ಕುದ್ರೋಳಿಯ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಪ್ರಾಣಿವಧೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇಯರ್ ಅವರು ಕೆಲ ಮನಪಾ ಸದಸ್ಯರು ಹಾಗೂ ಮನಪಾ ಅಧಿಕಾರಿಗಳೊಂದಿಗೆ ದಿಢೀರ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕಸಾಯಿಖಾನೆಯಲ್ಲಿ ಯಾವುದೇ ಪ್ರಾಣಿ ವಧೆ ನಡೆಯುತ್ತಿರಲಿಲ್ಲ. ಆದರೆ ಸಮೀಪದಲ್ಲಿ ವ್ಯಕ್ತಿಯೊಬ್ಬರು ಶೆಡ್‌ವೊಂದರಲ್ಲಿ ಅಕ್ರಮವಾಗಿ ಪ್ರಾಣಿ ವಧೆ ಮಾಡುತ್ತಿರುವುದು ಕಂಡುಬಂದಿದೆ. ಅಲ್ಲಿ ಪ್ರಾಣಿಗಳ ತಲೆ, ಕೊಂಬುಗಳು ಪತ್ತೆಯಾಗಿವೆ ಎಂದು ಮೇಯರ್ ಮಾಹಿತಿ ನೀಡಿದ್ದಾರೆ. ಈ ಕಸಾಯಿಖಾನೆಯ ಬಗ್ಗೆ ಪೊಲೀಸರಿಗೆ ದೂರು ನೀಡಲಾಗುವುದು. ಅಲ್ಲದೆ ಈ ಅಕ್ರಮ ಕಟ್ಟಡವನ್ನು ಧ್ವಂಸಗೊಳಿಸಲಾಗುವುದು ಎಂದು ಮೇಯರ್ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

15 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

27 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

42 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago