Featured

ಮಂಗಳೂರು : ಅಕ್ರಮ ದನ ಸಾಗಾಟದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಕುಖ್ಯಾತ ರೌಡಿಗಳ ಅರೆಸ್ಟ್ – Vishwanews24

ಮಂಗಳೂರು : ಅಕ್ರಮ ದನ ಸಾಗಾಟದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಕುಖ್ಯಾತ ರೌಡಿಗಳ ಅರೆಸ್ಟ್

ಮಂಗಳೂರು : ಮಂಗಳೂರಿನ ಅಡ್ಯಾರ್ ಪರಿಸರದಲ್ಲಿ ಅಕ್ರಮ ದನ ಸಾಗಾಟ ಮಾಡುತ್ತಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಬಂಧಿತರನ್ನು ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34), ಹೈದರಾಲಿ @ ಹೈದು(26) ಎಂದು ಗುರುತಿಸಲಾಗಿದೆ.

ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳನ್ನು ಬಂಧಿಸಿ ಅವರಿಂದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago