ಮಂಗಳೂರು : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಂದು ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್ ಚರ್ಚ್ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ.
ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್ ಆಲಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ತಾನು ಸುನೀಲ್ ಡಿ’ಸೋಜಾನೊಂದಿಗೆ ಸೇರಿ ಆಡಂಕುದ್ರುವಿನಲ್ಲಿ ನೇತ್ರಾವತಿ ನದಿಯ ತೀರದಿಂದ ಮರಳು ತುಂಬಿಸಿಕೊಂಡು ಹೋಗುತ್ತಿದ್ದು ಪಿಕಪ್ ವಾಹನಕ್ಕೆ ಸ್ಕೂಟರ್‌ನ್ನು ಬೆಂಗವಲಾಗಿ ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ.
ಆರೋಪಿಗಳು ರಾಜ್ಯ ಸರಕಾರಕ್ಕೆ ರಾಜಧನ ಪಾವತಿಸದೆ ಮರಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಖಚಿತವಾಗಿದೆ. ಪಿಕಪ್ ವಾಹನ, ಸುಮಾರು 40 ಬುಟ್ಟಿ ಮರಳು ಮತ್ತು ಸ್ಕೂಟರ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…