ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಸೋನಾಲಿ (30) ಎಂದು ಗುರುತಿಸಲಾಗಿದ್ದು, ಈಕೆಯನ್ನು ಆಕೆಯ ಪತಿ ಶಿವಲಿಂಗಪ್ಪ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
