ಮಂಗಳೂರು : ತಲಪಾಡಿ ಸಾಂತ್ಯ ಬಳಿ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆ ಬಯಲು ಮಾಡಿದ್ದಾರೆ. ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿನ ಮನೆಯಲ್ಲಿ ನಡೆಯುತ್ತಿದ್ದ ಸ್ಪಿರಿಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು 2240 ಲೀ ಮದ್ಯ ಸಾರ, 222 ಲೀ ನಕಲಿ ಬ್ರಾಂಡಿ ಸಹಿತ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಮೂವರನ್ನು ವಶಕ್ಕೆ ಪಡೆದಿದ್ದು ಓರ್ವ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೇರಳ ರಾಜ್ಯಕ್ಕೆ ಸಾಗಾಟ ಮಾಡಲು ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಬಳಿ ಸ್ಪಿರಿಟ್ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ 25ಕ್ಕೂ ಅಧಿಕ ಅಧಿಕಾರಿಗಳು ಗಡಿಭಾಗ ತಲಪಾಡಿಯಲ್ಲಿ ಅಕ್ರಮವಾಗಿ ಸ್ಪಿರಿಟ್ ಮತ್ತು ನಕಲಿ ಮದ್ಯ ದಾಸ್ತಾನಿನ ಮೇಲೆ ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ತಲಪಾಡಿ ನಿವಾಸಿ ಸತೀಶ್, ಕುಂಜತ್ತೂರು ನಿವಾಸಿಗಳಾದ ನೌಷಾದ್, ಅನ್ಸೀಫ್ ವಶಕ್ಕೆ ಪಡೆಯಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…