ಮಂಗಳೂರು: ಇಂದು ಮಂಗಳೂರು ಪುರಭವನದಲ್ಲಿ ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಅಂತಿಮ ವಿದಾಯ ಕೋರಲಾಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಾ.ಪ್ರಭಾಕರ ಜೋಷಿ, ದಿನೇಶ್ ಅಮೀನ್ ಮಟ್ಟು, ಡಾ. ಚಿನ್ನಪ್ಪ ಗೌಡ ಸೇರಿದಂತೆ ರಂಗಭೂಮಿ, ಸಾಹಿತ್ಯ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ನಮನ ಸಲ್ಲಿಸಿದರು. ಸದಾನಂದ ಸುವರ್ಣ ಅವರ ಇಚ್ಚೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರ ದೇಹ ದಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅವರು 1931, ಡಿಸೆಂಬರ್ 24 ರಂದು ಜನಿಸಿದ್ದರು. ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…