ಮಂಗಳೂರು: ನಾನು ಧಾರ್ಮಿಕ ನಿಂದನೆ ಮಾಡಿಲ್ಲ. ಆದ್ರೇ ಅಜಾನ್ ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ ಎಂಬುದಾಗಿ ಹೇಳಿದ್ದೇನೆ. ಅಲ್ಲಾನಿಗೆ ಕಿವಿ ಇದೆ ಇಲ್ವ ಅಂತ ನಾನು ಹೇಳಿದ್ದು ನಿಜ ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅಲ್ಲಾನಿಗೆ ಕಿವಿ ಇದೆ ಅಲ್ವ ಅಂತ ನಾನು ಹೇಳಿದ್ದು ನಿಜ. ಅಜಾನ್ ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ ಅಂತ ಹೇಳಿದ್ದೇನೆ. ಇದು ಧಾರ್ಮಿಕ ನಿಂದನೆ ಮಾಡಿದಂತೆ ಆಗಲ್ಲ ಎಂದು ಹೇಳಿದ್ದಾರೆ.
ಮುಸ್ಲಿಮರ ಅಝಾನ್ ಕುರಿತು ಹೇಳಿಕೆ ವಿವಾದವಲ್ಲ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಅಲ್ಲಾಹುವಿನ ಬಗ್ಗೆ ಅವಹೇಳನ ಮಾಡಿಲ್ಲ. ಆದರೆ ಅಝಾನ್ ವಿಚಾರದಲ್ಲಿ ಯಾರಾದರೂ ಮಾತನಾಡಲೇಬೇಕಿತ್ತು, ಮಾತನಾಡಿದ್ದೇನೆ. ಅದು ಶ್ರೀಸಾಮಾನ್ಯನ ಅನಿಸಿಕೆ, ನಾನು ಅದನ್ನು ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಮಾತನಾಡಿ ವಿವಾದ ಮಾಡುವ ವಿಚಾರ ಇಲ್ಲಿ ಬರುವುದೇ ಇಲ್ಲ ಎಂದು ಸ್ಪಷ್ಟನೆ ಕೊಟ್ಟ ಅವರು, ಗೋಹತ್ಯೆ ತಡೆ ಕಾಯ್ದೆ, ಮತಾಂತರ ತಡೆ ಕಾಯ್ದೆ, ತ್ರಿವಳಿ ತಲಾಖ್ ರದ್ದು ಇತ್ಯಾದಿಗಳೆಲ್ಲವೂ ನಮ್ಮ ಸರಕಾರದ ಸಾಧನೆಗಳು ಎಂದರು.
ತುರ್ತು ಪರಿಸ್ಥಿತಿಯಲ್ಲಿ ನಾವು ಜೈಲಿಗೆ ಹೋಗಿದ್ದೆವು. ಕೇವಲ ರಾಜಕಾರಣ ಮಾಡಲ್ಲ. ಹಾಗಂತ ನಾನು ಸನ್ಯಾಸಿಯಲ್ಲ. ನಾನು ಶಾಸಕನಾಗಿ ಮುಸ್ಲೀಮರಿಗೆ ಸಹಾಯ ಮಾಡುತ್ತಿದ್ದೇನೆ. ನನ್ನ ಮನೆಗೆ ಮುಸ್ಲೀಂ ಸಮುದಾಯದವರು ಬರುತ್ತಾರೆ. ಕಾಂಗ್ರೆಸ್ ಪಕ್ಷ ನಂಬಿದ್ರೇ ಮುಸ್ಲೀಮರಿಗೆ ಏನೂ ಪ್ರಯೋಜನವಿಲ್ಲ ಎಂಬುದಾಗಿ ತಿಳಿಸಿದೆ.
ಅಂದಹಾಗೇ ನಿನ್ನೆ ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡುತ್ತಿದ್ದ ಸಂದರ್ಭದಲ್ಲಿ ಆಜಾನ್ ಕೂಗಲಾಗಿತ್ತು. ಈ ವೇಳೆ ಮೈಕ್ ಹಾಕಿಕೊಂಡು ಕೂಗಿದ್ರೇ ಮಾತ್ರನ ಅಲ್ಲಾನಿಗೆ ಕಿವಿ ಕೇಳೋದು ಎಂದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…