Featured

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ : ರಮಾನಾಥ ರೈ ಆರೋಪ 

ನರೇಂದ್ರ ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂಬುದು ಈ ಮೂಲಕ ಸಾಬೀತು : ಐವನ್ ಡಿಸೋಜ

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ಮಂಗಳೂರಿನ ಕದ್ರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಖಾಲಿ ಗ್ಯಾಸ್ ಸಿಲಿಂಡರ್ಗೆ ಹೂಮಾಲೆ ಹಾಕಿ ಅದನ್ನು ಚಟ್ಟದ ಮೇಲೆ ಕಟ್ಟಿ ಕಾಂಗ್ರೆಸ್ ಕಾರ್ಯ ಕರ್ತರು ಹೊತ್ತುಕೊಂಡು ಕದ್ರಿ ಸರ್ಕಲ್ ಬಳಿ ಅಣಕು ಶವಯಾತ್ರೆ ನಡೆಸಿ ಸಾರ್ವಜನಿಕರ ಗಮನ ಸೆಳೆದರು. ಗ್ಯಾಸ್ ಸ್ಟೌ ಮತ್ತು ಖಾಲಿ ಪಾತ್ರೆಯನ್ನೂ ಪ್ರತಿಭಟನಾಕಾರರು ಪ್ರದರ್ಶಿಸಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ ಕೇಂದ್ರ ಸರಕಾರದ ವೈಫಲ್ಯದಿಂದ ದೇಶದಲ್ಲಿ ಅಡುಗೆ ಅನಿಲ ಸರಿಯಾಗಿ ಪೂರೈಕೆಯಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾ ಗುತ್ತಿದೆ. ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಅಡುಗೆ ಅನಿಲದ ಬೆಲೆಯು ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ.ಗೆ ಏರಿಕೆಯಾಗಿದೆ. ಪರಿಣಾಮ ಹೊಟೇಲ್ಗಳಲ್ಲಿ ತಿಂಡಿ ತಿನಿಸು, ಊಟದ ದರದಲ್ಲೂ ವಿಪರೀತ ಏರಿಕೆಯಾಗಿದೆ. ಆಟೊ ರಿಕ್ಷಾಗಳಿಗೆ ಎಲ್ಪಿಜಿ ಸಿಗದೆ ಚಾಲಕರು ಪರದಾಡುವಂತಾಗಿದೆ. ಇದಕ್ಕೆ ಬಿಜೆಪಿ, ಕೇಂದ್ರ ಸರಕಾರವೇ ಕಾರಣವಾಗಿದೆ.

ನರೇಂದ್ರ ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂಬುದನ್ನು ಈ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಆರೋಪಿಸಿದರು. ಅಧ್ಯಕ್ಷತೆ ವಹಿಸಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಮಾತನಾಡಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದರು.

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಬಶೀರ್, ಸುನೀತ್ ದೇಸಾಯಿ, ಮುಖಂಡರಾದ ಫಾರೂಕ್ ಪೆರ್ನೆ, ಆಸೀಫ್ ಬಜಾಲ್, ಸಮರ್ಥ್ ಭಟ್, ಪೃಥ್ವಿರಾಜ್, ಮೆಲ್ವಿನ್, ಚೇತನ್, ಮಹೇಶ್, ಪ್ರಜ್ವಲ್ ಮತ್ತಿತರರು ಪಾಲ್ಗೊಂಡಿದ್ದರು.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

3 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

3 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

4 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

4 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

5 hours ago

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು – vishwanews24

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ…

5 hours ago