ಮಂಗಳೂರು : ಅತ್ತಾವರ ಸಮೀಪದ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದ್ದು,ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಸಹೈನ್ ಮೂಸಬ್ ( 57) ಎಂದು ಗುರುತಿಸಲಾಗಿದೆ.
ನಗರದ ಅತ್ತಾವರದ ಐವರಿ ಟವರ್ ಎಂಬ ಅಪಾರ್ಟ್ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ಮೆಂಟ್ ಬೆಂಕಿ ತಗುಲುವ ವೇಳೆ ಮಹಿಳೆ ಸಹೈನ್ ಮೂಸಬ್ ( 57) ಬಾತ್ ರೂಂ ಗೆ ತೆರಳಿದ್ದರು. ಅವರು ಬೆಂಕಿಯ ಹೊಗೆಗೆ ಬಾತ್ ರೂಂ ನೊಳಗೆ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.
ಮನೆಯೊಳಗಿದ್ದ ಮತ್ತೊಬ್ಬರು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ತಗುಲುವ ಸಂದರ್ಭದಲ್ಲಿ ಮನೆಯಲ್ಲಿ ಒಂಭತ್ತು ಮಂದಿ ಇದ್ದರು. ಬೆಂಕಿ ತಗುಲುವ ವೇಳೆ ಅದರಲ್ಲಿ ಏಳು ಮಂದಿ ಹೊರಬಂದಿದ್ದಾರೆ. ನಂತರ ಇಬ್ಬರು ಒಳಗೆ ಇರುವುದು ತಿಳಿದಿದೆ. ಆದರೆ ಅವರನ್ನು ರಕ್ಷಿಸುವ ವೇಳೆ ಒಬ್ಬರು ಸಾವನ್ನಪ್ಪಿದ್ದು ಮತ್ತೊಬ್ಬರು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…