ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ

ಮಂಗಳೂರು : ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017 ರ ಅಡಿಯಲ್ಲಿ ಖಾಸಗಿ ಸಂಸ್ಥೆ/ ಕ್ಲಿನಿಕ್‍ಗಳು/ ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ/ ಕ್ಲಿನಿಕ್ ಲ್ಯಾಬೋರೇಟರಿಗಳನ್ನು ತನಿಖಾ ತಂಡದವರು ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಮೂಡುಶೆಡ್ಡೆ/ ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್ ಹಾಗೂ ಲ್ಯಾಬೋರೇಟರಿ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್‍ಗೆ ಬೀಗಮುದ್ರೆ ಹಾಕಿದ್ದಾರೆ.

ಮಲ್ಪೆ : ಬೀಚ್ ಮಧ್ಯೆ ಅಪಾಯಕಾರಿ ಜೀಪ್ ಚಾಲನೆ : ಇಬ್ಬರ ವಿರುದ್ಧ ಪ್ರಕರಣ ದಾಖಲು – vishwanews24

ಮಂಗಳೂರು ನಗರ ಗ್ರಾಮ ಪ್ರದೇಶಗಳಲ್ಲಿ ಈಗಾಗಲೇ ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದ ಅಲೋಪತಿ ಕ್ಲಿನಿಕ್, ಆಯುಷ್ ಕ್ಲಿನಿಕ್ , ಡೆಂಟಲ್ ಕ್ಲಿನಿಕ್, ಜನೆಟಿಕ್ ಲ್ಯಾಬೋರೇಟರಿಗಳು, ಫಿಸಿಯೋಥೆರಪಿ ಸೆಂಟರ್‍ಗಳು ಲ್ಯಾಬ್/ಲ್ಯಾಬ್ ಕಲೆಕ್ಷನ್ ಸೆಂಟರ್‍ಗಳು ಇತ್ಯಾದಿಗಳು ಹಾಗೂ ಈಗಾಗಲೇ ನೋಂದಾವಣೆಯಾಗಿ ನವೀಕರಣ ಮಾಡಲು ಬಾಕಿ ಇರುವ ಸಂಸ್ಥೆಗಳು ಕಡ್ಡಾಯವಾಗಿ ಒಂದು ವಾರದೊಳಗೆ ನೋಂದಾವಣೆ ಮಾಡಲು ಕಾಲಾವಕಾಶವನ್ನು ನೀಡಲಾಗಿದೆ.

ಈ ಅವಧಿಯೊಳಗೆ ಸಂಬಂಧಿಸಿದ ಕ್ಲಿನಿಕ್ , ಖಾಸಗಿ ಆರೋಗ್ಯ ಸಂಸ್ಥೆಗಳು ನೋಂದಾವಣೆ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕೆ.ಪಿ.ಎಂ.ಇ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಉಡುಪಿ: ಬಿಜೆಪಿಗರೇ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಕೇವಲ ಕನಸಿನ ಮಾತು : ಗೀತಾ ವಾಗ್ಲೆ – vishwanews24

Leave a Reply