ಮಂಗಳೂರು : ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017 ರ ಅಡಿಯಲ್ಲಿ ಖಾಸಗಿ ಸಂಸ್ಥೆ/ ಕ್ಲಿನಿಕ್‍ಗಳು/ ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ/ ಕ್ಲಿನಿಕ್ ಲ್ಯಾಬೋರೇಟರಿಗಳನ್ನು ತನಿಖಾ ತಂಡದವರು ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಮೂಡುಶೆಡ್ಡೆ/ ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್ ಹಾಗೂ ಲ್ಯಾಬೋರೇಟರಿ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್‍ಗೆ ಬೀಗಮುದ್ರೆ ಹಾಕಿದ್ದಾರೆ.
ಮಂಗಳೂರು ನಗರ ಗ್ರಾಮ ಪ್ರದೇಶಗಳಲ್ಲಿ ಈಗಾಗಲೇ ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದ ಅಲೋಪತಿ ಕ್ಲಿನಿಕ್, ಆಯುಷ್ ಕ್ಲಿನಿಕ್ , ಡೆಂಟಲ್ ಕ್ಲಿನಿಕ್, ಜನೆಟಿಕ್ ಲ್ಯಾಬೋರೇಟರಿಗಳು, ಫಿಸಿಯೋಥೆರಪಿ ಸೆಂಟರ್‍ಗಳು ಲ್ಯಾಬ್/ಲ್ಯಾಬ್ ಕಲೆಕ್ಷನ್ ಸೆಂಟರ್‍ಗಳು ಇತ್ಯಾದಿಗಳು ಹಾಗೂ ಈಗಾಗಲೇ ನೋಂದಾವಣೆಯಾಗಿ ನವೀಕರಣ ಮಾಡಲು ಬಾಕಿ ಇರುವ ಸಂಸ್ಥೆಗಳು ಕಡ್ಡಾಯವಾಗಿ ಒಂದು ವಾರದೊಳಗೆ ನೋಂದಾವಣೆ ಮಾಡಲು ಕಾಲಾವಕಾಶವನ್ನು ನೀಡಲಾಗಿದೆ.
ಈ ಅವಧಿಯೊಳಗೆ ಸಂಬಂಧಿಸಿದ ಕ್ಲಿನಿಕ್ , ಖಾಸಗಿ ಆರೋಗ್ಯ ಸಂಸ್ಥೆಗಳು ನೋಂದಾವಣೆ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕೆ.ಪಿ.ಎಂ.ಇ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…