ಮಂಗಳೂರು : ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ.
ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ.
ಗ್ರಾಮ ಪಂಚಾಯತಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು ಕ್ರಮ ಕೈಗೊಂಡಿದ್ದರೂ, ಕೆಲವೇ ಪಡಿತರ ಚೀಟಿದಾರರು ಮಾತ್ರ ಬಿಪಿಎಲ್ ಪಡಿತರ ಚೀಟಿಯನ್ನು ಕಚೇರಿಗೆ ಹಾಜರು ಪಡಿಸಿರುತ್ತಾರೆ. ಆದಾಗ್ಯೂ ಇನ್ನೂ ನಿಗದಿತ ಮಾನದಂಡಗಳ ಹೊರತಾಗಿ ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ವಾಹನಗಳ ಮಾಲಿಕತ್ವದ ಬಗ್ಗೆ ಆರ್‍ಟಿಓ ಡಾಟಾ, ಖಾಸಗಿ/ಸರಕಾರಿ/ನಿಗಮ/ಮಂಡಳಿಗಳ ಸಿಬ್ಬಂದಿಗಳ ಮಾಹಿತಿಯನ್ನು ಪಡೆದು, ಪಡಿತರ ಚೀಟಿಯೊಂದಿಗೆ ಜೋಡಣೆಯಾಗಿರುವ ಆಧಾರ್ ಸಂಖ್ಯೆಯನ್ನು ತಾಳೆ ನೋಡುವುದು, ಕಟ್ಟಡ/ಭೂಮಿ ವಿಸ್ತೀರ್ಣದ ವಿವರದ ಬಗ್ಗೆ ಸಂಬಂಧ ಪಟ್ಟ ಕಛೇರಿಯಿಂದ ಮಾಹಿತಿ ಪಡೆದುಕೊಳ್ಳುವುದು ಇವೇ ಮುಂತಾದ ಕ್ರಮ ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ಕಂಡು ಬಂದ ಅನರ್ಹ ಪಡಿತರ ಚೀಟಿದಾರರ ವಿರುದ್ಧದ ಕರ್ನಾಟಕ (ರೇಷನ್ ಕಾರ್ಡ್ ಅನಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಗಟ್ಟುವುದು) ಆದೇಶ 1977 ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಆದುದರಿಂದ ಯಾರು ಅನರ್ಹ ಪಡಿತರ ಚೀಟಿ ಹೊಂದಿರುತ್ತಾರೆಯೋ ಅಂತಹವರು ಕೂಡಲೇ ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ತಾಲೂಕು ಕಚೇರಿಗೆ ಹಾಜರುಪಡಿಸುವಂತೆ ತಹಶೀಲ್ದಾರರು, ಮಂಗಳೂರು ತಾಲೂಕು ಇವರ ಪ್ರಕಟಣೆ ತಿಳಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…