Featured

ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ  ಪೊಲೀಸ್ ಠಾಣೆಯೇ ಆಸರೆ -Vishwanews24

ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ  ಪೊಲೀಸ್ ಠಾಣೆಯೇ ಆಸರೆ -Vishwanews24

ಮಂಗಳೂರು: ನಾಲ್ಕೂ ದಶಕದ ಹಿಂದೆ ಅನಾಥವಾಗಿದ್ದ ಯುವತಿಗೆ ಇಲ್ಲೊಂದು ಪೊಲೀಸ್ ಠಾಣೆಯ ಸಿಬ್ಬಂದಿಗಳೇ ಕುಟುಂಬ ಸದಸ್ಯರಾಗಿದ್ದಾರೆ. ಯಸ್ ಅನಾಥ ಯುವತಿ ಇದೀಗ 60 ವಯಸ್ಸಿನ ಮಹಿಳೆಯಾಗಿದ್ದು ನಾಲ್ಕೂ ದಶಕದಿಂದ ಈಕೆಗೆ ಠಾಣೆಯೇ ಮನೆಯಾಗಿದೆ.

20 ವರ್ಷಗಳ ಯುವತಿಯಾಗಿದ್ದ ಇವರು ಸುಮಾರು 40 ವರ್ಷಗಳ ಹಿಂದೆ ರೈಲ್ವೆ ನಿಲ್ದಾಣದಲ್ಲಿ ಅನಾಥೆಯಾಗಿ ಪತ್ತೆಯಾಗಿದ್ದರು. ಅಂದಿನ ಪೊಲೀಸ್ ಅಧಿಕಾರಿಯೊಬ್ಬರು ಯಾರೂ ಇಲ್ಲದೆ ಬೀದಿಪಾಲಾಗಿದ್ದ ಇವರಿಗೆ ಠಾಣೆಯಲ್ಲಿಯೇ ಆಶ್ರಯ ನೀಡಿದ್ದರು. ಪೊಲೀಸರೇ ಹೊನ್ನಮ್ಮ ಎಂದು ನಾಮಕರಣ ಮಾಡಿದ್ದರು‌. ಆರಂಭದಲ್ಲಿ ಕುಟುಂಬಸ್ಥರ ಪತ್ತೆಗೆ ಪೊಲೀಸರು ಪ್ರಯತ್ನಪಟ್ಟಿದ್ದರು. ಆದರೆ, ಯಾವುದೇ ಪ್ರಯೋಜನವಾಗದೇ ಇದ್ದ ಸಂದರ್ಭದಲ್ಲಿ ಠಾಣೆಯಲ್ಲಿಯೇ ಅವರಿಗೆ ಜಾಗ ನೀಡಿದ್ದರು. ಬಳಿಕ ಸಣ್ಣಪುಟ್ಟ ಕೆಲಸ ಮಾಡಿಕೊಂಡು 40 ವರ್ಷಗಳಿಂದ ನಗರದ ಬಂದರು ಪೊಲೀಸ್ ಠಾಣೆಯನ್ನೇ ಆಶ್ರಯ, ಆಸರೆ ಮಾಡಿಕೊಂಡಿದ್ದಾರೆ ಹೊನ್ನಮ್ಮ ಅವರು.

ಠಾಣೆಯನ್ನು ಗುಡಿಸಿ, ಒರೆಸಿ, ಒಪ್ಪ ಓರಣಗೊಳಿಸುವ ಕಾರ್ಯವಲ್ಲದೆ, ಪೊಲೀಸರಿಗೆ ಏನಾದರೂ ಸಣ್ಣಪುಟ್ಟ ಕಾರ್ಯದಲ್ಲಿ ನೆರವಾಗುತ್ತಿದ್ದಾರೆ. ಇದಕ್ಕೆ ಅವರಿಗೆ ಸಂಬಳವನ್ನೂ ನೀಡಲಾಗುತ್ತದೆ. ಮಾನವೀಯತೆ ನೆಲೆಯಲ್ಲಿ ಈಕೆಗೆ ಬಂದರು ಪೊಲೀಸ್ ಠಾಣೆಯ ಹೊರಗಡೆಯೇ ಆಶ್ರಯಕ್ಕಾಗಿ ಒಂದು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಈಕೆಯ ಊಟ, ವಸತಿ, ಆಶ್ರಯ ಎಲ್ಲವೂ ಅಲ್ಲಿಯೇ ಆಗುತ್ತದೆ.

ಮೂಗಿ,ಕಿವುಡಿಯಾದ್ರು ಹೊನ್ನಮ್ಮನದು ಚುರುಕಿನ ವ್ಯಕ್ತಿತ್ವ. ಠಾಣೆಯನ್ನು ಶುಚಿಗೊಳಿಸುವ, ಪೊಲೀಸರಿಗೆ ಸಹಾಯ ಮಾಡುವ ಕೆಲಸ ಮಾಡುತ್ತಾರೆ. ಮಾನವೀಯತೆ ನೆಲೆಯಲ್ಲಿ ಠಾಣೆಯ ಹಿಂಭಾಗದಲ್ಲಿ ಪ್ರತ್ಯೇಕ ಕೊಠಡಿ ನೀಡಲಾಗಿದೆ. ಊಟ ತಿಂಡಿಯನ್ನು ಪೊಲೀಸರು ನೀಡುತ್ತಿದ್ದು, ಒಮ್ಮೊಮ್ಮೆ ಇವರೇ ಅಡುಗೆ ತಯಾರಿಸಿಕೊಳ್ಳುತ್ತಾರೆ. ಇದರ ಜೊತೆ ಹೊನ್ನಮ್ಮ ಬ್ಯಾಂಕ್ ಖಾತೆ, ಮತದಾರರ ಚೀಟಿ, ಆಧಾರ್ ಕಾರ್ಡ್ ಹೊಂದಿದ್ದಾರೆ. ಆಧಾರ್ ಕಾರ್ಡ್‌ನಲ್ಲಿ ಪೊಲೀಸ್ ಠಾಣೆಯದ್ದೆ ಖಾಯಂ ವಿಳಾಸವಿದೆ. ಪೊಲೀಸರು ವಿಶೇಷ ಸಂದರ್ಭದಲ್ಲಿ ಈಕೆಗೆ ಹಣ ಕೊಡುತ್ತಾರೆ, ಮಾಡಿದ ಕೆಲಸಕ್ಕೆ ವೇತನವನ್ನು ನೀಡುತ್ತಾರೆ. ಈ ಎಲ್ಲಾ ಹಣವನ್ನು ದುಂದುವೆಚ್ಚ ಮಾಡದೇ ಬ್ಯಾಂಕ್ ಖಾತೆ ಜಮಾ ಮಾಡುತ್ತಾರೆ.

ಪೊಲೀಸ್ ಇಲಾಖೆಯ, ಸಿಬ್ಬಂದಿಗಳ ಮನೆಯಲ್ಲಿ ಕಾರ್ಯಕ್ರಮವಿದ್ದರೆ ಇವರಿಗೆ ಗೊತ್ತಾಗುತ್ತೆ. ಹೊಸ ಸೀರೆ ಎಲ್ಲಾ ಉಟ್ಟು ಇವರು ರೆಡಿಯಾಗುತ್ತಾರೆ. ಒಟ್ಟಿನಲ್ಲಿ ಹೊನ್ನಮ್ಮನಿಗೆ ಬಂದರು ಠಾಣೆಯೆ ಮನೆಯಾಗಿದ್ದು, ಭಾವನಾತ್ಮಕ ನಂಟು ಹೊಂದಿದ್ದಾರೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago