Featured

ಮಂಗಳೂರು : ಅನುಶ್ರೀ ಮೇಲಿನ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ : ಎನ್. ಶಶಿಕುಮಾರ್ -Vishwanews24

ಮಂಗಳೂರು : ಅನುಶ್ರೀ ಮೇಲಿನ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ : ಎನ್. ಶಶಿಕುಮಾರ್ -Vishwanews24

ಮಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರನ್ನು ಕೈಬಿಟ್ಟಿರುವುದಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಿರೂಪಕಿ ಅನುಶ್ರೀ ವಿರುದ್ದ ಯಾವುದೇ ಸಾಕ್ಷಿಗಳಿಲ್ಲದ ಕಾರಣ ಅವರನ್ನು ಪ್ರಕರಣದಿಂದ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಮತ್ತೊಬ್ಬ ಆರೋಪಿ ಕಿಶೋರ್ ಅಮನ್ ಶೆಟ್ಟಿ ಚಾರ್ಜ್ ಶೀಟ್ ನಲ್ಲಿರುವ ಹೇಳಿಕೆಗಳನ್ನು ನನ್ನದಲ್ಲ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಚಾರ್ಜ್ ಶೀಟ್ಸಲ್ಲಿಕೆ ವಿಚಾರವಾಗಿ ಯಾವುದೇ ಆರೋಪಗಳಿದ್ದರೆ ವಕೀಲರ ಮೂಲಕ ಕೋರ್ಟ್ ಗೆ ಹೇಳಬಹುದು ಎಂದಿದ್ದಾರೆ.

ಆ ಕೇಸ್‌ನ ಸ್ಟೇಟಸ್‌‌ ಬಗ್ಗೆ ಮಾಹಿತಿ ಪಡೆದಿದ್ದೇನೆ. ಚಾರ್ಜ್ ಶೀಟ್‌ ಪ್ರಕರಣದ ಅಂತಿಮ ವರದಿಯಾಗಿರುತ್ತದೆ. ಅದು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಟ್ರಯಲ್‌ ನಡೆಯುತ್ತಿದೆ. ಪ್ರಕರಣದ ಸಂಬಂಧ ಮತ್ತೆ ಅನುಶ್ರೀ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇಲ್ಲ” ಎಂದು ಹೇಳಿದ್ದಾರೆ.

ಒಂಭತ್ತು ತಿಂಗಳ ಹಿಂದೆಯೇ ಅಂತಿಮ ವರದಿ ಸಲ್ಲಿಸಿದ್ದೇವೆ. ಈಗ ಯಾಕೆ ಈ ವಿಚಾರ ಸುದ್ದಿಯಾಯಿತು ಗೊತ್ತಿಲ್ಲ ಎಂದಿದ್ದಾರೆ. ಅನುಶ್ರೀ ಮೇಲೆ ಬಂದ ಆರೋಪಕ್ಕೆ ಪೂರಕ ಸಾಕ್ಷಿಗಳು ಲಭ್ಯವಾಗಿಲ್ಲ. ಆರು ಜನ ಆರೋಪಿಗಳ ಮೇಲೆ ಅಂತಿಮ ವರದಿ ಸಲ್ಲಿಸಿದ್ದೇವೆ. ಐದು ಜನ ಆರೋಪಿಗಳಿಗೆ ಜಾಮೀನು ಆಗಿದ್ದು, ಒಬ್ಬ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. 2020 ರ ಸೆಪ್ಟೆಂಬರ್ 19 ಕ್ಕೆ ಪ್ರಕರಣ ದಾಖಲಾಗಿತ್ತು. ಅದೇ ವರ್ಷ ಡಿಸೆಂಬರ್ 11 ಕ್ಕೆ ಅಂತಿಮ ವರದಿ ಸಲ್ಲಿಸಿದ್ದೇವೆ ಎಂದು ವಿವರಿಸಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

7 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

8 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

9 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

11 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

11 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

11 hours ago