ಮಂಗಳೂರು: ದ.ಕ. ಜಿಲ್ಲಾ ಪೊಲೀಸ್ ನ ಅಪರಾಧ ಪತ್ತೆದಳ ವಿಭಾಗದ ಶ್ವಾನದಳದ “ಜ್ವಾಲಾ’ ಎಂಬ ಹೆಸರಿನ ಶ್ವಾನ ಮಂಗಳವಾರ ಮೃತಪಟ್ಟಿದೆ.
ಡಾಬರ್‌ಮನ್ ಪಿಂಚರ್ ತಳಿಗೆ ಸೇರಿದ ಜ್ವಾಲಾ ದಕ್ಷಿಣ ಕನ್ನಡ ಜಿಲ್ಲಾ ಶ್ವಾನ ದಳದಲ್ಲಿ ಅಪರಾಧ ಪ್ರಕರಣಗಳ ಪತ್ತೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಹಾಯ ಮಾಡುತ್ತಿತ್ತು. ಕಳೆದ ಕೆಲವು ಸಮಯಗಳಿಂದ ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜ್ವಾಲಾ ಇಂದು ಬೆಳಿಗ್ಗೆ ಸಾವನ್ನಪ್ಪಿದೆ.
ಮೃತ ಶ್ವಾನಕ್ಕೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜ್ವಾಲಾಳನ್ನು ಸಿಬಂದಿ ಕುಮಾರ ಕತ್ಲೇರ ನಿರ್ವಹಿಸುತ್ತಿದ್ದರು.
ಕಿಡ್ನಿ ಸಮಸ್ಯೆಯಿಂದಾಗಿ ‘ಜ್ವಾಲಾ’ ಮೃತಪಟ್ಟಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೊನಾವಣೆ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…