ಮಂಗಳೂರು: ಅಪಾರ್ಟ್ಮೆಂಟ್ಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡರೆ ಎಲ್ಲರಿಗೂ ತಪಾಸಣೆ – Vishwanews24
ಮಂಗಳೂರು: ಅಪಾರ್ಟ್ಮೆಂಟ್ಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡರೆ ಎಲ್ಲರಿಗೂ ತಪಾಸಣೆ – Vishwanews24
ಮಂಗಳೂರು: ಕೊರೊನಾ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯುವ ಉದ್ದೇಶದಿಂದ ಮಂಗಳೂರು ಮನಪಾ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡರೆ ಅಂತಹ ಅಪಾರ್ಟ್ಮೆಂಟ್ನಲ್ಲಿರುವ ಎಲ್ಲರನ್ನೂ ಕೊರೊನಾ ತಪಾಸಣೆಗೆ ಒಳಪಡಿಸಲಾಗುತ್ತದೆ ಎಂಬ ಹೊಸ ನಿಯಮ ಜಾರಿಯಾಗಿದೆ.
ಪ್ರಸ್ತುತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 17ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಥಮಿಕ ಸಂಪರ್ಕಿತರ ತಪಾಸಣೆ ಮಾಡಲಾಗುತ್ತದೆ. ಆದ್ದರಿಂದ ಇನ್ನು ಮುಂದೆ ಅಪಾರ್ಟ್ಮೆಂಟ್ಗಳಲ್ಲಿ ಕೊರೊನಾ ಪ್ರಕರಣ ಕಂಡು ಬಂದಲ್ಲಿ ಆ ವಸತಿ ಸಮುಚ್ಚಯದ ಎಲ್ಲರನ್ನೂ ಪ್ರಾಥಮಿಕ ಸಂಪರ್ಕಕಿತರೆಂದು ಪರಿಗಣಿಸಿ ಕೋವಿಡ್ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ.
