Featured

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ  ಡಾ.ಪದ್ಮನಾಭ ಕಾಮತ್‌ -Vishwanews24

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ  ಡಾ.ಪದ್ಮನಾಭ ಕಾಮತ್‌ -Vishwanews24

ಮಂಗಳೂರು :  ಅಪ್ಪನ ಸಾವಿನ ನೋವಿನಲ್ಲೂ ಇಬ್ಬರ ಜೀವ ಉಳಿಸುವ ಮೂಲಕ ಮಂಗಳೂರಿನ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಅವರು ವೈದ್ಯ ವೃತ್ತಿಯ ಸಾರ್ಥಕತೆ ಮೆರೆದಿದ್ದು, ‘ವೈದ್ಯೋ ನಾರಾಯಣೋ ಹರಿಃ’ ಎಂಬುದನ್ನು ಅಕ್ಷರಶಃ ಸಾಬೀತು ಮಾಡಿದ್ದಾರೆ. ಅವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಮಂಗಳೂರು ಕೆಎಂಸಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್‌ ಫೆ.26ರಂದು ರಾತ್ರಿ ಎಂದಿನಂತೆ ರೋಗಿಗಳ ಪರೀಕ್ಷೆಯಲ್ಲಿ ನಿರತರಾಗಿದ್ದರು. ಈ ವೇಳೆ ಪದ್ಮನಾಭ್‌ ಅವರ ತಂದೆ, ದ.ಕ. ಜಿಲ್ಲೆಯ ಮಾಜಿ ಮಲೇರಿಯಾ ಅಧಿಕಾರಿ ಡಾ. ಮಂಜುನಾಥ ಕಾಮತ್‌ ಅವರ ದೇಹಸ್ಥಿತಿ ಗಂಭೀರವಾಗಿದೆ ಎಂದು ಮನೆಯಿಂದ ಫೋನ್‌ ಬಂದಿತ್ತು. ಕೂಡಲೇ ಮನೆಗೆ ತೆರಳಿದ ಪದ್ಮನಾಭ್‌, ತುರ್ತು ಚಿಕಿತ್ಸೆ ನೀಡಿದರಾದರೂ ವಯೋ ಸಹಜವಾಗಿಯೇ ಅವರ ಕಣ್ಣ ಮುಂದೆಯೇ ತಂದೆ ತೀರಿಕೊಂಡಿದ್ದರು.

ಕಾಂಗ್ರೆಸ್‌ ಪಕ್ಷವು ‍ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್‌ ಶಾ -Vishwanews24

ತಕ್ಷಣ ತಂದೆಯವರ ಶರೀರವನ್ನು ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಸಾವನ್ನು ಖಚಿತ ಪಡಿಸಿದ್ದರು. ಮೃತದೇಹ ಹಸ್ತಾಂತರಕ್ಕೆ ಇನ್ನೂ ಕೆಲವು ಸಮಯ ಇದ್ದಾಗ, ಹೃದ್ರೋಗಿಯೊಬ್ಬರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯ ಇರುವುದಾಗಿ ಕರೆ ಬಂದಿತ್ತು. ಪದ್ಮನಾಭ್‌ ಅವರು ತಂದೆಯನ್ನು ಕಳೆದುಕೊಂಡ ನೋವಲ್ಲೂ, ರೋಗಿಯ ಶಸ್ತ್ರಚಿಕಿತ್ಸೆ ನೆರವೇರಿಸಿದರು, ಜೀವದಾನ ಮಾಡಿದ್ದರು.

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

ಇನ್ನು ಫೆ.27ರಂದು ಮಂಜುನಾಥ ಕಾಮತ್‌ ಅವರ ಅಂತ್ಯಕ್ರಿಯೆ ನೆರವೇರಿತು. ಅಪ್ಪನ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಪದ್ಮನಾಭ ಕಾಮತ್‌ ಅವರಿಗೆ ಸ್ನಾತಕೋತ್ತರ ವಿದ್ಯಾರ್ಥಿಯಿಂದ ಪದೇ ಪದೆ ಫೋನ್‌ ಕರೆ ಬರತೊಡಗಿತ್ತು. ಕರೆ ಸ್ವೀಕರಿಸಿದರೆ ಆಸ್ಪತ್ರೆಯ ಅಡುಗೆ ಸಿಬ್ಬಂದಿಯೊಬ್ಬರಿಗೆ ತೀವ್ರ ಹೃದಯಾಘಾತವಾಗಿರುವುದು ತಿಳಿಯಿತು. ಕೂಡಲೇ ಆಸ್ಪತ್ರೆಗೆ ಹೊರಟ ಕಾಮತರು, ಕೆಲವೇ ನಿಮಿಷಗಳಲ್ಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದರು. ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಡಾ. ಪದ್ಮನಾಭ ಕಾಮತ್‌ ಅವರು ಅಪರೂಪದ ಕರ್ತವ್ಯನಿಷ್ಠೆ ಮೆರೆದಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24

ರೋಗಿಯ ಒಳಿತೇ ನನ್ನ ಆದ್ಯ ಕರ್ತವ್ಯವಾಗಿತ್ತು. ಹಾಗಾಗಿ ರೋಗಿಯನ್ನು ಉಳಿಸಲು ಆಸ್ಪತ್ರೆಗೆ ಹೊರಟಾಗ ಯಾವುದೇ ರೀತಿಯ ಅಸ್ಥೈರ್ಯ ನನಗಾಗಲಿಲ್ಲ. ಅಂತಿಮವಾಗಿ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಂಡಿದ್ದೇನೆ.

– ಡಾ. ಪದ್ಮನಾಭ ಕಾಮತ್‌, ಹೃದ್ರೋಗ ವೈದ್ಯ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago