ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿಯ ಬಂಧನ – Vishwanews24
ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿಯ ಬಂಧನ – Vishwanews24
ಮಂಗಳೂರು,: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಒಂದುವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡ ಆರೋಪಿಯು ಬಳಿಕ ಆಕೆಗೆ ಮೊಬೈಲ್ ಖರೀದಿಸಿದ್ದು ನೀಡಿದ್ದು ಆ ಬಳಿಕ ಪ್ರತಿದಿನ ಸಂದೇಶ ಮಾಡುತ್ತಿದ್ದ ಎನ್ನಲಾಗಿದೆ.
ಆ ಬಳಿಕ ಸಲಿಗೆ ಬೆಳೆಸಿ ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರವೆಸಗಿದ್ದಾನೆ ಎಂದು ಮಹಿ ಳಾ ಠಾಣೆಯಲ್ಲಿ ನೀಡಲಾದ ದೂರಿನಲ್ಲಿ ಆರೋಪಿಸಲಾಗಿದೆ. ಬುಧವಾರ ಅಪ್ರಾಪ್ತೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಕ್ಲಿನಿಕ್ ಗೆ ತೆರಳಿ ತಪಾಸಣೆ ಮಾಡಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.ಅಲ್ಲಿನ ವೈದ್ಯರ ಸೂಚನೆಯಂತೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
