Featured

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ಸುದೀರ್ಘ ಕಾಲ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಚರ್ಚ್‌ನ ಫಾದರ್ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಆರೋಪಿಯನ್ನು ಫಾದರ್ ಸಿಪ್ರಿಯನ್ ಪಿಂಟೋ ಎಂದು ಗುರುತಿಸಲಾಗಿದೆ. ಎಫ್‌ಐಆರ್ ಮಾಹಿತಿಯ ಪ್ರಕಾರ, ಪ್ರಾರ್ಥನೆಗಾಗಿ ಚರ್ಚ್‌ಗೆ ನಿಯಮಿತವಾಗಿ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಆಮಿಷ ಒಡ್ಡಿದ್ದ ಧರ್ಮಗುರು, ಆತನನ್ನು ಖಾಸಗಿಯಾಗಿ ಪ್ರಾರ್ಥನಾ ಕೊಠಡಿ ಹಾಗೂ ತಮ್ಮ ವಸತಿ ಕೊಠಡಿಗೆ ಕರೆಸಿಕೊಂಡು ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

2026ರ ಆಗಸ್ಟ್ 14 ಸಂಜೆ ಪ್ರಾರ್ಥನೆಯ ಸಮಯದಲ್ಲಿ ಧರ್ಮಗುರು ಬಾಲಕನಿಗೆ ಮತ್ತೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಭಯಭೀತನಾದ ಅಪ್ರಾಪ್ತ ತನ್ನ ಸ್ನೇಹಿತರೊಂದಿಗೆ ಈ ವಿಷಯವನ್ನು ಹಂಚಿಕೊಂಡಾಗ, ಇನ್ನು ಕೆಲವು ಬಾಲಕರಿಗೂ ಇದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ.

ಭಯಗೊಂಡ ಸಂತ್ರಸ್ತ ಬಾಲಕ ಕೊನೆಗೆ ತನ್ನ ಕುಟುಂಬದ ಸದಸ್ಯರಿಗೆ ಈ ವಿಷಯ ತಿಳಿಸಿದ್ದಾನೆ. ಪೋಷಕರು ತಕ್ಷಣವೇ ಈ ವಿಚಾರವನ್ನು ಬಿಷಪ್ ಗಮನಕ್ಕೆ ತಂದಿದ್ದಾರೆ. ಬಿಷಪ್ ಅವರ ಸಲಹೆಯಂತೆ ಪೋಷಕರು ಪೊಲೀಸರನ್ನು ಸಂಪರ್ಕಿಸಿ ಅಧಿಕೃತ ದೂರು ನೀಡಿದ್ದಾರೆ. ಈ ಸಮಾಲೋಚನೆ ಪ್ರಕ್ರಿಯೆಯಿಂದಾಗಿ ದೂರು ನೀಡಲು ವಿಳಂಬವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೋಕ್ಸೋ ಕಾಯ್ದೆಯ ಮಾರ್ಗಸೂಚಿಗಳ ಪ್ರಕಾರ, ಸಂತ್ರಸ್ತ ಮತ್ತು ದೂರುದಾರರ ಗುರುತನ್ನು ಗೌಪ್ಯವಾಗಿಡಲಾಗಿದೆ. ಮಂಗಳೂರು ದಕ್ಷಿಣ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

13 minutes ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

33 minutes ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 day ago