ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ
ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆಕಾರು ಪೋಸ್ಟ್ ನಿವಾಸಿ ಆಶೀಶ್ ಪೂಜಾರಿ (33) ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಮಾರ್ಚ್ 18ರಂದು ದಾಖಲಾದ ದೂರಿನ ಮೇರೆಗೆ, 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಇದೇ ವೇಳೆ, ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ:
ಮಂಗಳೂರು: ಅಕ್ರಮ ದನ ಸಾಗಾಟ ಪತ್ತೆ ; 4 ದನಗಳ ರಕ್ಷಣೆ, ಆರೋಪಿಗಳು ಪರಾರಿ – vishwanews24
ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಯಾಗಿ ಆಶೀಶ್ ಪೂಜಾರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ
