ಮಂಗಳೂರು :ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಆರೋಪಿ ವ್ಯಕ್ತಿ ಅಡಿಕೆ ಖರೀದಿ ಅಂಗಡಿಯನ್ನು ಹೊಂದಿದ್ದು, ನವೆಂಬರ್ 21ರಂದು ಅಂಗಡಿ ಬಳಿಯಲ್ಲಿ ಆಟವಾಡುತ್ತಿದ್ದ ಹೆಣ್ಣು ಮಗುವಿಗೆ ಕಿರುಕುಳ ಕೊಟ್ಟಿದ್ದಾನೆಂದು ಆರೋಪಿಸಲಾಗಿದೆ. ಮಗು ಅಸಹಜವಾಗಿ ವರ್ತಿಸಿದ್ದರಿಂದ ಮಗುವಿನ ತಾಯಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಕೋಣಾಜೆ ಠಾಣೆಗೆ ತೆರಳಿ ಮಗುವಿನ ತಾಯಿ ದೂರು ನೀಡಿದ್ದಾರೆ.
ಕೊಣಾಜೆ ಪೊಲೀಸರು ಪೋಕ್ಸೋ ಕಾಯ್ದೆಯ ಸೆಕ್ಷನ್ 9, 10 ಮತ್ತು 12 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 65 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಬ್ದುಲ್ಲಾನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…