ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೂವರನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು ಹಾಗೂ ಮತ್ತೊಬ್ಬ ಕಾಸರಗೋಡಿನವರು ಎಂದು ತಿಳಿದು ಬಂದಿದೆ.
ಮುಡಿಪುವಿನ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಸಿನವಳಾಗಿರುವ ಮಗಳಿಗೆ ಆಲ್ಕೋಹಾಲ್ ಕುಡಿಸಿ ಮತ್ತು ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.
ಈ ಹಿಂದೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿಗುಡ್ಡೆ ಎಂಬಲ್ಲಿ ನಡೆದ ಪ್ರಕರಣದ ಆರೋಪಿಗಳಲ್ಲಿ ಓರ್ವ ಈ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಚಿಲಿಂಬಿ ಗುಡ್ಡದ ಪ್ರಕರಣದಲ್ಲೂ ಬಾಲಕಿ ತಾಯಿಯ ದೂರಿನ ಮೇರೆಗೆ ಪೊಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಾಲಕಿ ಈ ಹಿಂದೆ ನಾಪತ್ತೆಯಾಗಿದ್ದಾಳೆಂದು ಪೋಷಕರು ದೂರು ನೀಡಿದ್ದರು. ಬಳಿಕ ನಾಪತ್ತೆಯಾಗಿಲ್ಲ ಬದಲಿಗೆ ಆಕೆಗೆ ಯಾರೋ ಚುಡಾಯಿಸಿರುವುದು ಗಮನಕ್ಕೆ ಬಂದಿದ್ದು, ಬಾಲಕಿ ಆ ಸಂದರ್ಭ ಠಾಣೆಗೆ ಬಂದಿದ್ದಾಗ, ಹೆಡ್ ಕಾನ್ಸ್‌ಸ್ಟೆಬಲ್ ಆಕೆಯ ಪೋನ್ ನಂಬರ್ ಪಡೆದು ಆಕೆಯ ಜತೆ ಅನುಚಿತವಾಗಿ ಮೊಬೈಲ್ ಸಂದೇಶಗಳನ್ನು ಹಂಚಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಹೆಡ್‌ಕಾನ್‌ಸ್ಟೇಬಲ್ ನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿತ್ತು.
ಇನ್ನು ಘಟನೆಯ ಬಗ್ಗೆ ಬಾಲಕಿಯ ತಾಯಿ ಹೇಳುವಂತೆ, ಅವರೆಲ್ಲರು ಪರಿಚಯಿಸ್ಥರಾಗಿದ್ದು, ಈ ಹಿಂದೆಯೂ ತನ್ನ ಸ್ನೇಹಿತೆಯರ ಜತೆ ಹೋಗುತ್ತಿದ್ದಳು. ಇದೀಗ ಹುಡುಗರ ಜತೆ ಹೋಗಿದ್ದಾಳೆಂಬ ಹಿನ್ನೆಲೆಯಲ್ಲಿ ದೂರು ನೀಡಿದ್ದು, ಪೊಕ್ಸೋ ಪ್ರಕರದಡಿ ಮೂರು ಮಂದಿಯನ್ನು ಬಂಧಿಸಲಾಗಿದೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…