Featured

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಮೂವರ ಬಂಧನ -Vishwanews24

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಮೂವರ ಬಂಧನ -Vishwanews24

ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೂವರನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು ಹಾಗೂ ಮತ್ತೊಬ್ಬ ಕಾಸರಗೋಡಿನವರು ಎಂದು ತಿಳಿದು ಬಂದಿದೆ.

ಮುಡಿಪುವಿನ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಸಿನವಳಾಗಿರುವ ಮಗಳಿಗೆ ಆಲ್ಕೋಹಾಲ್ ಕುಡಿಸಿ ಮತ್ತು ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.

ಈ ಹಿಂದೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿಗುಡ್ಡೆ ಎಂಬಲ್ಲಿ ನಡೆದ ಪ್ರಕರಣದ ಆರೋಪಿಗಳಲ್ಲಿ ಓರ್ವ ಈ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಚಿಲಿಂಬಿ ಗುಡ್ಡದ ಪ್ರಕರಣದಲ್ಲೂ ಬಾಲಕಿ ತಾಯಿಯ ದೂರಿನ ಮೇರೆಗೆ ಪೊಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಾಲಕಿ ಈ ಹಿಂದೆ ನಾಪತ್ತೆಯಾಗಿದ್ದಾಳೆಂದು ಪೋಷಕರು ದೂರು ನೀಡಿದ್ದರು. ಬಳಿಕ ನಾಪತ್ತೆಯಾಗಿಲ್ಲ ಬದಲಿಗೆ ಆಕೆಗೆ ಯಾರೋ ಚುಡಾಯಿಸಿರುವುದು ಗಮನಕ್ಕೆ ಬಂದಿದ್ದು, ಬಾಲಕಿ ಆ ಸಂದರ್ಭ ಠಾಣೆಗೆ ಬಂದಿದ್ದಾಗ, ಹೆಡ್ ಕಾನ್ಸ್‌ಸ್ಟೆಬಲ್ ಆಕೆಯ ಪೋನ್ ನಂಬರ್ ಪಡೆದು ಆಕೆಯ ಜತೆ ಅನುಚಿತವಾಗಿ ಮೊಬೈಲ್ ಸಂದೇಶಗಳನ್ನು ಹಂಚಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಹೆಡ್‌ಕಾನ್‌ಸ್ಟೇಬಲ್ ನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿತ್ತು.

ಇನ್ನು ಘಟನೆಯ ಬಗ್ಗೆ ಬಾಲಕಿಯ ತಾಯಿ ಹೇಳುವಂತೆ, ಅವರೆಲ್ಲರು ಪರಿಚಯಿಸ್ಥರಾಗಿದ್ದು, ಈ ಹಿಂದೆಯೂ ತನ್ನ ಸ್ನೇಹಿತೆಯರ ಜತೆ ಹೋಗುತ್ತಿದ್ದಳು. ಇದೀಗ ಹುಡುಗರ ಜತೆ ಹೋಗಿದ್ದಾಳೆಂಬ ಹಿನ್ನೆಲೆಯಲ್ಲಿ ದೂರು ನೀಡಿದ್ದು, ಪೊಕ್ಸೋ ಪ್ರಕರದಡಿ ಮೂರು ಮಂದಿಯನ್ನು ಬಂಧಿಸಲಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

5 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

5 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago