Featured

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ;  ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ – vishwanews24

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣ ;  ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್(27) ಶಿಕ್ಷೆಗೊಳಗಾದ ಅಪರಾಧಿ.

ಪ್ರಕರಣದ ಹಿನ್ನೆಲೆ
ಈ ಪ್ರಕರಣದ 13 ವರ್ಷದ ಸಂತ್ರಸ್ತ ಬಾಲಕಿಯು ಆರೋಪಿ ಸುಧೀರ್‌ನ ಮನೆಗೆ ರಜಾ ದಿನಗಳಲ್ಲಿ ಹಾಗೆಯೇ ಇತರ ದಿನಗಳಲ್ಲಿ ಟಿ.ವಿ. ನೋಡಲು ಹೋಗುತ್ತಿದ್ದಳು. ಕೆಲವೊಂದು ಬಾರಿ ಸುಧೀರ್ ಮಾತ್ರ ಮನೆಯಲ್ಲಿರುತ್ತಿದ್ದನು. ಬಾಲಕಿಯು 2021ನೇ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಆತನ ಮನೆಗೆ ಟಿ.ವಿ. ನೋಡಲು ತೆರಳಿದ್ದಾಗ ಅಂಗಡಿಗೆ ಹೋಗಿ ಬರೋಣವೆಂದು ಹೇಳಿ, ಅಂಗಡಿಗೆ ಕರೆದುಕೊಂಡು ಹೋಗದೆ ಮನೆಯಿಂದ ಸ್ವಲ್ಪ ದೂರದಲ್ಲಿರುವ ಸುಧೀರ್‌ನ ಅಜ್ಜಿಯ ಯಾರೂ ವಾಸವಿಲ್ಲದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದನು.

ಈ ವಿಚಾರವನ್ನು ತಾಯಿಗೆ ಹೇಳುತ್ತೇನೆ ಎಂದು ಬಾಲಕಿ ಹೇಳಿದಾಗ ತಾಯಿಗೆ ಹೇಳಿದರೆ ನೀನೆ ನನ್ನ ಬಳಿ ಬಂದದ್ದು ಎಂದು ಹೇಳಿ ಪೊಲೀಸ್ ದೂರು ನೀಡುತ್ತೇನೆ ಎಂದು ಹೇಳಿ ಹೆದರಿಸಿದ್ದ. ಅನಂತರದ ದಿನಗಳಲ್ಲೂ ಬಾಲಕಿ ಆತನ ಮನೆಗೆ ರಜಾ ದಿನಗಳಲ್ಲಿ ಟಿ.ವಿ. ನೋಡಲು ಹೋದಾಗ ಮನೆಯಲ್ಲಿ ಯಾರೂ ಇಲ್ಲದೆ ಇದ್ದಾಗ ಅತ್ಯಾಚಾರವೆಸಗಿದ್ದ. ಜೊತಗೆ ಆತನ ಅಜ್ಜಿ ಮನೆಯಲ್ಲಿಯೂ ಹಲವಾರು ಬಾರಿ ಅತ್ಯಾಚಾರ ಎಸಗಿದ್ದ. ಬಾಲಕಿಯು 2022 ಆಗಸ್ಟ್ ತಿಂಗಳ ಬಳಿಕ ಗರ್ಭಿಣಿಯಾಗಿದ್ದಳು.

ನಂತರ ಆರೋಪಿ ಮತ್ತು ಇತರರು ಸೇರಿ ಚಿಕ್ಕಮಗಳೂರು ಕಡೆ ಎಲ್ಲಿಯಾದರೂ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸುವುದಾಗಿ ಯೋಜನೆ ರೂಪಿಸಿದ್ದರು. ಮದುವೆ ಆಗಿದ್ದು ಗಂಡ-ಹೆಂಡತಿ ಎಂದು ಆಸ್ಪತ್ರೆಯವರಿಗೆ ನಂಬಿಸಲು ಆಕೆಗೆ ಕಾಲುಂಗುರ, ಬೆಳ್ಳಿಯ ಕರಿಮಣಿ ಸರ ಹಾಕಿಸಿ ಮದುಮಗಳಂತೆ ಅಲಂಕರಿಸಿ ಆತನನೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಾಲಕಿಯ ಮನೆಗೆ ತೆರಳಿ ಆಕೆಯ ತಾಯಿಗೆ ಮದುವೆ ಮತ್ತು ಬರ್ತ್ಡೇಗೆ ಹೋಗಲು ಇದೆ ಎಂದು ಹೇಳಿ ನೊಂದ ಬಾಲಕಿಯನ್ನು ಸುಧೀರ್ ಮತ್ತು ಇತರರು 2022ರ ಡಿ. 17ರಂದು ಚಿಕ್ಕಮಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಯಲ್ಲಿ ಆಕೆ ತನ್ನ ಹೆಂಡತಿ ಎಂದು ವೈದ್ಯರಿಗೆ ತಿಳಿಸಿ ಗರ್ಭಪಾತ ಮಾಡಿಸಿದ್ದ.

ಬಳಿಕ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಆಗಿನ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಮತ್ತು ಸತ್ಯನಾರಾಯಣ ಕೆ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಚಾರ್ಜ್ ಶೀಟ್ ಅನ್ನು ಕೋರ್ಟ್ ಗೆ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಆರೋಪಿಯ ವಿರುದ್ಧ ಅಪರಾಧ ಸಾಬೀತಾಗಿದೆ. ಈ ಹಿನ್ನೆಲೆ ಅತ್ಯಾಚಾರ ಮಾಡಿದ ಅಪರಾಧಕ್ಕೆ ಭಾರತೀಯ ದಂಡ ಸಂಹಿತೆಯ ಕಲಂ: 376 ಮತ್ತು ಕಲಂ: 6 ಪೊಕ್ಸೊ ಕಾಯ್ದೆಯಂತೆ 20 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಲಾಗಿದೆ. ಸಾಕ್ಷ್ಯನಾಶ ಮಾಡಿದ ಅಪರಾಧಕ್ಕೆ ಭಾರತೀಯ ದಂಡ ಸಂಹಿತೆಯ ಕಲಂ: 201ರಡಿ 3 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗಿದೆ. ದಂಡದ ಹಣವಾದ 50 ಸಾವಿರ ರೂ. ಅನ್ನು ನೊಂದ ಬಾಲಕಿಗೆ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ.

ದಂಡ ಪ್ರಕ್ರಿಯೆ ಸಂಹಿತೆಯ ಕಲಂ: 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ 2 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶಿಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago