Judge and gavel in courtroom
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್‌ಸ್ಟೆಬಲ್ ಪ್ರವೀಣ್ ಸಾಲ್ಯಾನ್ (35) ಮೇಲಿದ್ದ ಆರೋಪವು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೊ)ದಲ್ಲಿ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದ ಹಿನ್ನಲೆ:
ಬಜಪೆ ಸಿದ್ಧಾರ್ಥ ನಗರ ನಿವಾಸಿ ಪ್ರವೀಣ್ ಸಾಲ್ಯಾನ್ 2015ರ ಫೆ. 16ರಂದು ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ. ಅನಂತರ ತಾನು ಪ್ರೀತಿಸುತ್ತಿರುವುದಾಗಿ ನಾಟಕವಾಡಿದ ಆತ ನಿರಂತರ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಮೂಲಕ ಆಕೆಯನ್ನು ಸಂಪರ್ಕಿಸುತ್ತಿದ್ದ. ತನ್ನ ಗುಪ್ತಾಂಗದ ಚಿತ್ರಗಳನ್ನು ಆಕೆಗೆ ಕಳುಹಿಸಿ, ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದ. ಬಳಿಕ ಅಕೆಯಲ್ಲಿ ಒಂದು ಲಕ್ಷ ರೂ. ಹಣ ಅಥವಾ ಚಿನ್ನ ನೀಡಬೇಕು ಎಂದು ಬೇಡಿಕೆಯಿಟ್ಟು ಬೆದರಿಸಿದ್ದ. ಇದರಿಂದ ಆತಂಕಗೊಂಡ ಆಕೆ 2015ರ ಜೂ. 10ರಂದು ಬೆಳಗ್ಗೆ 5ರಿಂದ 6.15ರ ನಡುವೆ ತನ್ನ ಮನೆಯ ಬೆಡ್‌ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ – Vishwanews24
ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿ ಅಪರಾಧಿಗೆ ಐಪಿಸಿ 305ರಡಿ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಹಾಗೂ ಸೆಕ್ಷನ್ 12ರಡಿ (ಪೋಕ್ಸೊ) 3 ವರ್ಷ ಕಠಿನ ಸಜೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…