Featured

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 1.10 ಲಕ್ಷ ರೂ. ದಂಡ -Vishwanews24

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 1.10 ಲಕ್ಷ ರೂ. ದಂಡ -Vishwanews24

ಮಂಗಳೂರು (Vishwanews24): ಮೂರು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಶಿಕ್ಷೆಗೊಳಗಾದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ ಶಶಿಕುಮಾರ್ (29) ಎಂದು ಗುರುತಿಸಲಾಗಿದೆ.

ಆರೋಪಿ ಶಶಿಕುಮಾರ್ ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿನ ಫೈನಾನ್ಸ್‌ನಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದು, ಈತ ತನ್ನ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕರೇ ಆಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದು, 2017ರ ನವೆಂಬರ್‌ನಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಆ ಬಳಿಕ ಅನೇಕ ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.

ಉಡುಪಿ : ಏ.10 ರಿಂದ 20 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೊರೋನಾ ಕರ್ಫ್ಯೂಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಇನ್ನು ಕೆಲವು ಸಮಯದ ಬಳಿಕ ಆಕೆಗೆ ಆರೋಗ್ಯ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಧಾವಿಸಿದಾಗ ಆಕೆ ಗರ್ಭಿಣಿಯಾಗಿರುವುದನ್ನು ವೈದ್ಯರು ತಿಳಿಸಿದ್ದಾರೆ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು.

ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018ರ ಜೂ.26ರಂದು ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಆಗ ಇದ್ದ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯ್ಕೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಸಂತ್ರಸ್ತ ಮಗುವಿನ ಹಾಗೂ ಶಶಿಕುಮಾರ್‌ನ ಡಿಎನ್‌ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿತ್ತು. 13 ಮಂದಿ ಸಾಕ್ಷಿ ಹೇಳಿದ್ದು, 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿತ್ತು. ನ್ಯಾಯಾಧೀಶೆ ಸಾವಿತ್ರಿ ವೆಂಕಟರಮಣ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.

ಇನ್ನು ದಂಡದ ಮೊತ್ತದಲ್ಲಿ 1 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.

ಕಾಪು : ನಿವೃತ್ತ ಸಿ.ಆರ್.ಪಿ.ಎಫ್ ಯೋಧನ ಪತ್ನಿ ವನಜಾಕ್ಷಿ ಅವರಿಗೆ ಸಮ್ಮಾನ, ಗೌರವ ಅರ್ಪಣೆ -Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

8 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago