ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಮಾಡಿದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಆರ್. ಪಲ್ಲವಿ ಅವರು ಆರೋಪಿ ತಪ್ಪಿತಸ್ಥ ಎಂದು ಸಾಬೀತು ಪಡಿಸಿದ್ದು ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದಾರೆ.
ಅತ್ಯಾಚಾರ ನಡೆಸಿದಕ್ಕಾಗಿ ಐಪಿಸಿ 376 ಹಾಗೂ ಪೋಕ್ಸೋ ಸೆ.6(ಲೈಂಗಿಕ ದೌರ್ಜನ್ಯ) ಅನ್ವಯ ಜೀವಾವಧಿ ಶಿಕ್ಷೆ ಹಾಗೂ 5ಸಾವಿರ ರೂಪಾಯಿ ದಂಡ ವಿಧಿಸಲಾಗಿದ್ದು ದಂಡ ಮೊತ್ತದಲ್ಲಿ 3 ಸಾವಿರವನ್ನು ಸಂತ್ರಸ್ಥ ಬಾಲಕಿಗೆ ನೀಡಬೇಕು ಹಾಗೂ 2 ಸಾವಿರವನ್ನು ಸರಕಾರಕ್ಕೆ ಪಾವತಿ ಮಾಡಬೇಕು. ಅಲ್ಲದೇ ಸಂತ್ರಸ್ಥ ಬಾಲಕಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರಕಾರದಿಂದ ಪರಿಹಾರ ಪಡೆಯಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.
ಅಪರಾಧಿ ಕಿಶೋರ್ ಭಯ್ಯಾ (36) ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರದಲ್ಲಿ ವಾಸವಾಗಿದ್ದು ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ.
2016ರಲ್ಲಿ ಕಿಶೋರ್ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ ಮಾಡಿದ್ದು ಕೊಲೆ ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಬಾಲಕಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ. ಆ ಬಳಿಕ ಆರೋಪಿ ತಂದೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದು ಆ ಪರಿಣಾಮವಾಗಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಬಾಲಕಿಯ ತಾಯಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…