Featured

ಮಂಗಳೂರು : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಪ್ರಕರಣ : ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ -Vishwanews24

ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಮಾಡಿದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಆರ್‌. ಪಲ್ಲವಿ ಅವರು ಆರೋಪಿ ತಪ್ಪಿತಸ್ಥ ಎಂದು ಸಾಬೀತು ಪಡಿಸಿದ್ದು ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದಾರೆ.

ಅತ್ಯಾಚಾರ ನಡೆಸಿದಕ್ಕಾಗಿ ಐಪಿಸಿ 376 ಹಾಗೂ ಪೋಕ್ಸೋ ಸೆ.6(ಲೈಂಗಿಕ ದೌರ್ಜನ್ಯ) ಅನ್ವಯ ಜೀವಾವಧಿ ಶಿಕ್ಷೆ ಹಾಗೂ 5ಸಾವಿರ ರೂಪಾಯಿ ದಂಡ ವಿಧಿಸಲಾಗಿದ್ದು ದಂಡ ಮೊತ್ತದಲ್ಲಿ 3 ಸಾವಿರವನ್ನು ಸಂತ್ರಸ್ಥ ಬಾಲಕಿಗೆ ನೀಡಬೇಕು ಹಾಗೂ 2 ಸಾವಿರವನ್ನು ಸರಕಾರಕ್ಕೆ ಪಾವತಿ ಮಾಡಬೇಕು. ಅಲ್ಲದೇ ಸಂತ್ರಸ್ಥ ಬಾಲಕಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರಕಾರದಿಂದ ಪರಿಹಾರ ಪಡೆಯಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

ಅಪರಾಧಿ ಕಿಶೋರ್‌ ಭಯ್ಯಾ (36) ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರದಲ್ಲಿ ವಾಸವಾಗಿದ್ದು ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ.

2016ರಲ್ಲಿ ಕಿಶೋರ್‌ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್‌ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ ಮಾಡಿದ್ದು ಕೊಲೆ ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಬಾಲಕಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ. ಆ ಬಳಿಕ ಆರೋಪಿ ತಂದೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದು ಆ ಪರಿಣಾಮವಾಗಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಬಾಲಕಿಯ ತಾಯಿ ನಗರದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago