ಮಂಗಳೂರು: ಅಯ್ಯಪ್ಪಸ್ವಾಮಿ ವೃತಧಾರಿ ವಿದ್ಯಾರ್ಥಿಯೊಬ್ಬನಿಗೆ ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ನಗರದ ಶಾಲೆಯೊಂದರ ಬಳಿ ನಡೆದಿದೆ.
ನಗರದ ಶಾಲೆಯೊಂದರ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈಹಿಂದೆ ಹಲವು ಬಾರಿ ಗಲಾಟೆ ನಡೆದಿತ್ತು. ಗಲಾಟೆ ನಡೆಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಎಚ್ಚರಿಕೆ ನೀಡಿದ್ದರು. ಆದರೆ ಮಂಗಳವಾರ ಮತ್ತೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು 9ನೇ ತರಗತಿ ವಿದ್ಯಾರ್ಥಿಗಳು 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದರು. ಬಳಿಕ ಸಂಜೆ ವೇಳೆ ಶಾಲೆ ಬಿಟ್ಟು ಆ ವಿದ್ಯಾರ್ಥಿ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ 9ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.
ಕೂಡಲೇ ಸ್ಥಳೀಯರು ಆಗಮಿಸಿ ವಿದ್ಯಾರ್ಥಿಗಳನ್ನು ತಡೆದಿದ್ದಾರೆ. ಗಾಯಾಳು ವಿದ್ಯಾರ್ಥಿಯನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲ್ಲೆ ನಡೆದ ಕೂಡಲೇ ಸ್ಥಳದಲ್ಲಿ ಯುವಕರು ಜಮಾಯಿಸಿದ್ದು, ಸ್ವಲ್ಪ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಬಳಿಕ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಘಟನೆ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…