Featured

ಮಂಗಳೂರು: ಅಯ್ಯಪ್ಪಸ್ವಾಮಿ ವೃತದಾರಿ ವಿದ್ಯಾರ್ಥಿ ಮೇಲೆ ನಾಲ್ವರು ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ – Vishwanews24

ಮಂಗಳೂರು: ಅಯ್ಯಪ್ಪಸ್ವಾಮಿ ವೃತದಾರಿ ವಿದ್ಯಾರ್ಥಿ ಮೇಲೆ ನಾಲ್ವರು ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ

ಮಂಗಳೂರು: ಅಯ್ಯಪ್ಪಸ್ವಾಮಿ ವೃತಧಾರಿ ವಿದ್ಯಾರ್ಥಿಯೊಬ್ಬನಿಗೆ ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ನಗರದ ಶಾಲೆಯೊಂದರ ಬಳಿ ನಡೆದಿದೆ.

ನಗರದ ಶಾಲೆಯೊಂದರ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈಹಿಂದೆ ಹಲವು ಬಾರಿ ಗಲಾಟೆ ನಡೆದಿತ್ತು. ಗಲಾಟೆ ನಡೆಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಎಚ್ಚರಿಕೆ ನೀಡಿದ್ದರು. ಆದರೆ ಮಂಗಳವಾರ ಮತ್ತೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು 9ನೇ ತರಗತಿ ವಿದ್ಯಾರ್ಥಿಗಳು 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದರು. ಬಳಿಕ ಸಂಜೆ ವೇಳೆ ಶಾಲೆ ಬಿಟ್ಟು ಆ ವಿದ್ಯಾರ್ಥಿ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ 9ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಕೂಡಲೇ ಸ್ಥಳೀಯರು ಆಗಮಿಸಿ ವಿದ್ಯಾರ್ಥಿಗಳನ್ನು ತಡೆದಿದ್ದಾರೆ. ಗಾಯಾಳು ವಿದ್ಯಾರ್ಥಿಯನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲ್ಲೆ ನಡೆದ ಕೂಡಲೇ ಸ್ಥಳದಲ್ಲಿ ಯುವಕರು ಜಮಾಯಿಸಿದ್ದು, ಸ್ವಲ್ಪ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಬಳಿಕ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಘಟನೆ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago